Ranji Trophy 2025: 9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
Ranji Trophy 2025 Siddharth Desai: ರಣಜಿ ಟೂರ್ನಿ ಇತಿಹಾಸದಲ್ಲಿ ಗುಜರಾತ್ ಪರ ಒಂದೇ ಇನಿಂಗ್ಸ್ನಲ್ಲಿ 9 ವಿಕೆಟ್ ಕಬಳಿಸಿದ ವಿಶೇಷ ದಾಖಲೆಯೊಂದನ್ನು ಸ್ಪಿನ್ನರ್ ಸಿದ್ಧಾರ್ಥ್ ದೇಸಾಯಿ ನಿರ್ಮಿಸಿದ್ದಾರೆ. ಉತ್ತರಾಖಂಡ್ ವಿರುದ್ಧ ಪಂದ್ಯದಲ್ಲಿ 9 ವಿಕೆಟ್ ಕಬಳಿಸಿ, ಗುಜರಾತ್ ತಂಡದ ಪರ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎನಿಸಿಕೊಂಡಿದ್ದಾರೆ.
ರಣಜಿ ಟೂರ್ನಿ ಗ್ರೂಪ್-ಬಿ ಪಂದ್ಯದಲ್ಲಿ ಗುಜರಾತ್ ತಂಡದ ಸ್ಪಿನ್ನರ್ ಸಿದ್ಧಾರ್ಥ್ ದೇಸಾಯಿ ದಾಖಲೆ ಬರೆದಿದ್ದಾರೆ. ಅದು ಕೂಡ ಬರೋಬ್ಬರಿ 9 ವಿಕೆಟ್ ಕಬಳಿಸುವ ಮೂಲಕ ಎಂಬುದು ವಿಶೇಷ. ಅಹಮದಾಬಾದ್ನ ಗುಜರಾತ್ ಕಾಲೇಜ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಉತ್ತರಾಖಂಡ್ ತಂಡವು ಸಿದ್ಧಾರ್ಥ್ ಸ್ಪಿನ್ ಮೋಡಿಗೆ ಪೆವಿಲಿಯನ್ ಪರೇಡ್ ನಡೆಸಿತು.
ಉತ್ತರಾಖಂಡ್ ತಂಡದ ಆರಂಭಿಕ ಆಟಗಾರ ಪ್ರಿಯಾಂಶು ಖಂಡೂರಿ (7) ಯನ್ನು ಔಟ್ ಮಾಡಿ ವಿಕೆಟ್ ಬೇಟೆ ಆರಂಭಿಸಿದ ಸಿದ್ಧಾರ್ಥ್ ದೇಸಾಯಿ, ಬ್ಯಾಕ್ ಟು ಬ್ಯಾಕ್ 9 ವಿಕೆಟ್ ಕಬಳಿಸಿದ್ದು ವಿಶೇಷ. ಆದರೆ ಕೊನೆಯ ಬ್ಯಾಟರ್ ಹರ್ಷ ಪಟ್ವಾಲ್ (0) ರನ್ನು ವಿಶಾಲ್ ಜೈಸ್ವಾಲ್ ಬೌಲ್ಡ್ ಮಾಡಿದರು. ಇದರೊಂದಿಗೆ ಇನಿಂಗ್ಸ್ವೊಂದರಲ್ಲಿ 10 ವಿಕೆಟ್ ಕಬಳಿಸುವ ಅವಕಾಶ ಸಿದ್ಧಾರ್ಥ್ ದೇಸಾಯಿ ಕೈ ತಪ್ಪಿತು.
ಇದಾಗ್ಯೂ 15 ಓವರ್ಗಳಲ್ಲಿ ಕೇವಲ 36 ರನ್ ನೀಡಿ 9 ವಿಕೆಟ್ ಕಬಳಿಸಿದ ಸಿದ್ಧಾರ್ಥ್ ದೇಸಾಯಿ ಗುಜರಾತ್ ಪರ ರಣಜಿ ಟೂರ್ನಿಯಲ್ಲಿ ಒಂದೇ ಇನಿಂಗ್ಸ್ನಲ್ಲಿ ಅತೀ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ಬರೆದರು. ಇನ್ನು ಸಿದ್ಧಾರ್ಥ್ ಅವರ ಈ ಸ್ಪಿನ್ ಮೋಡಿಗೆ ತತ್ತರಿಸಿದ ಉತ್ತರಾಖಂಡ್ ತಂಡವು ಮೊದಲ ಇನಿಂಗ್ಸ್ನಲ್ಲಿ 111 ರನ್ಗಳಿಗೆ ಆಲೌಟ್ ಆಗಿದೆ.