AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಆಟಗಾರನ ಜೊತೆ ಕಾಲ್ಕೆರೆದು ಜಗಳಕ್ಕಿಳಿದ ಜೆಕೆ ನಾಯಕ

ರಣಜಿ ಟ್ರೋಫಿ ಫೈನಲ್: ಕರ್ನಾಟಕದ ಆಟಗಾರನ ಜೊತೆ ಕಾಲ್ಕೆರೆದು ಜಗಳಕ್ಕಿಳಿದ ಜೆಕೆ ನಾಯಕ

ಪೃಥ್ವಿಶಂಕರ
|

Updated on: Feb 25, 2026 | 4:15 PM

Share

Ranji Trophy final 2025-26: ಹುಬ್ಬಳ್ಳಿಯಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಫೈನಲ್‌ನಲ್ಲಿ ಕರ್ನಾಟಕ ಮತ್ತು ಜಮ್ಮು ಮತ್ತು ಕಾಶ್ಮೀರ ಆಟಗಾರರಾದ ಪರಾಸ್ ಡೋಗ್ರಾ ಮತ್ತು ಅನೀಶ್ ಕೆವಿ ನಡುವೆ ಮೈದಾನದಲ್ಲಿ ಜಗಳವಾಗಿದೆ. ವಾಗ್ವಾದ ತಾರಕಕ್ಕೇರಿ ಪರಾಸ್ ಡೋಗ್ರಾ ಅನೀಶ್ ಕೆವಿ ತಲೆಗೆ ಡಿಚ್ಚಿ ಹೊಡೆದಿದ್ದಾರೆ. ಮಾಯಾಂಕ್ ಅಗರ್ವಾಲ್ ಮಧ್ಯಪ್ರವೇಶಿಸಿದ್ದು, ಅಂಪೈರ್‌ಗಳು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಈ ಘಟನೆ ರಣಜಿ ಫೈನಲ್‌ನ ಶಿಸ್ತಿನ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಹುಬ್ಬಳ್ಳಿಯ ಕೆಎಸ್‌ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ 2025- 26ರ ರಣಜಿ ಟ್ರೋಫಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಜಮ್ಮು ಮತ್ತು ಕಾಶ್ಮೀರ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದ ಎರಡನೇ ದಿನದಾಟದಂದು ಜಮ್ಮು ಮತ್ತು ಕಾಶ್ಮೀರ ತಂಡದ ನಾಯಕ ಪರಾಸ್ ಡೋಗ್ರಾ ಮತ್ತು ಕರ್ನಾಟಕದ ಫೀಲ್ಡರ್ ಅನೀಶ್ ಕೆವಿ ಮೈದಾನದಲ್ಲಿಯೇ ಜಗಳ ಮಾಡಿಕೊಂಡಿದ್ದಾರೆ. ಜಗಳ ವಿಕೋಪಕ್ಕೆ ತೆರಳಿ, ಜೆಕೆ ನಾಯಕ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಚ್ಚಿ ಹೊಡೆದಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಕರ್ನಾಟಕದ ಮಾಜಿ ನಾಯಕ ಮಯಾಂಕ್ ಅಗರ್ವಾಲ್, ಪರಾಸ್ ಡೋಗ್ರಾ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಇದನ್ನು ಗಮನಿಸಿದ ಅಂಪೈರ್​ಗಳು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಇನ್ನಿಂಗ್ಸ್‌ನ 100 ನೇ ಓವರ್‌ನಲ್ಲಿ ಈ ಘಟನೆ ನಡೆದಿದ್ದು, ಪ್ರಸಿದ್ಧ್ ಕೃಷ್ಣ ಎಸೆತವನ್ನು ಪರಾಸ್ ಡೋಗ್ರಾ ಗಲ್ಲಿ ದಿಕ್ಕಿನಲ್ಲಿ ಆಡಿದರು. ಅಲ್ಲಿದ್ದ ಫೀಲ್ಡರ್ ಡೈವ್ ಮಾಡಿ ಚೆಂಡನ್ನು ತಡೆಯಲು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ. ಹೀಗಾಗಿ ಚೆಂಡು ಬೌಂಡರಿ ಗೆರೆ ದಾಟಿತು. ಈ ನಡುವೆ ಸಿಲ್ಲಿ ಪಾಯಿಂಟ್‌ನಲ್ಲಿ ಫಿಲ್ಡಿಂಗ್ ಮಾಡುತ್ತಿದ್ದ ಕರ್ನಾಟಕದ ಕೆವಿ ಅನೀಶ್ ಹಾಗೂ ಪರಾಸ್ ಡೋಗ್ರಾ ನಡುವೆ ಮಾತಿನ ಚಕಮಕಿ ಪ್ರಾರಂಭವಾಗಿದೆ. ಇದೇ ವೇಳೆ ಪರಾಸ್ ಡೋಗ್ರಾ, ಅನೀಶ್ ತಲೆಗೆ ಡಿಕ್ಕಿ ಹೊಡೆದಿದ್ದಾರೆ. ಪರಿಸ್ಥಿತಿ ಕೈಮೀರಿ ಅಂತಕ್ಕೆ ಸಾಗಿದೆ.

ಈ ಹಂತದಲ್ಲಿ, ಮಾಯಾಂಕ್ ಅಗರ್ವಾಲ್ ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಆದರೆ, ಸ್ವಲ್ಪ ಸಮಯದವರೆಗೆ ವಾದ ಮುಂದುವರೆಯಿತು. ಕೊನೆಗೆ, ಅಂಪೈರ್‌ಗಳು ಮಧ್ಯಪ್ರವೇಶಿಸಿ ಡೋಗ್ರಾ ಮತ್ತು ಅನೀಶ್ ಅವರನ್ನು ಬೇರ್ಪಡಿಸಿದರು. ಘಟನೆಯ ನಂತರ, ಅಂಪೈರ್‌ಗಳು ಕರ್ನಾಟಕದ ನಾಯಕ ದೇವದತ್ ಪಡಿಕ್ಕಲ್ ಅವರೊಂದಿಗೆ ಮಾತನಾಡಿ, ಫೀಲ್ಡಿಂಗ್ ತಂಡ ಶಿಸ್ತನ್ನು ಪಾಲಿಸುವಂತೆ ಎಚ್ಚರಿಸಿದರು. ನಂತರ, ಪರಾಸ್ ಡೋಗ್ರಾ ಅನೀಶ್ ಕೆವಿ ಅವರ ಬಳಿ ಕ್ಷಮೆಯಾಚಿಸಲು ಪ್ರಯತ್ನಿಸಿದರು. ಆದರೆ ಬದಲಿ ಫೀಲ್ಡರ್ ಅನೀಶ್ ಕ್ಷಮೆಯಾಚನೆಯನ್ನು ಸ್ವೀಕರಿಸಲು ಆಸಕ್ತಿ ತೋರಲಿಲ್ಲ. ಅಂಪೈರ್ ಪರಿಸ್ಥಿತಿಯನ್ನು ವಿವರಿಸುವ ಮೂಲಕ ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು.

Follow Us