ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್ನ ಝಲಕ್ ಇಲ್ಲಿದೆ
KL Rahul Century: ರಣಜಿ ಟ್ರೋಫಿ ಕ್ವಾರ್ಟರ್ ಫೈನಲ್‌ನಲ್ಲಿ ಕೆಎಲ್ ರಾಹುಲ್ ಅವರ ಅಜೇಯ 130 ರನ್ ಶತಕದ ನೆರವಿನಿಂದ ಕರ್ನಾಟಕ ತಂಡ ಮುಂಬೈ ವಿರುದ್ಧ 4 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಕರ್ನಾಟಕ ಸೆಮಿಫೈನಲ್‌ಗೆ ಪ್ರವೇಶಿಸಿದ್ದು, ರಾಹುಲ್ ಅವರ ನಾಲ್ಕನೇ ಇನ್ನಿಂಗ್ಸ್ ಶತಕವು ತಂಡವನ್ನು ಸಂಕಷ್ಟದಿಂದ ಪಾರು ಮಾಡಿತು.
ರಣಜಿ ಟ್ರೋಫಿಯ ನಾಲ್ಕನೇ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಹಾಗೂ ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡದ ಪರ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸುವ ಮೂಲಕ ಸಂಕಷ್ಟದಿಂದ ತಂಡಕ್ಕೆ ನೆರವಾದರು. ಎರಡನೇ ಇನ್ನಿಂಗ್ಸ್‌ನಲ್ಲಿ 130 ರನ್ ಬಾರಿಸಿದ ರಾಹುಲ್, ಈ ಶತಕದೊಂದಿಗೆ ಕರ್ನಾಟಕ ತಂಡದ ಗೆಲುವನ್ನು ಖಚಿತಪಡಿಸಿದರು. ಮುಂಬೈ ನೀಡಿದ 325 ರನ್‌ಗಳ ಗುರಿಯನ್ನು ಬೆನ್ನಟ್ಟಿ ಕರ್ನಾಟಕ 4 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದು ಕೆಎಲ್ ರಾಹುಲ್ ಪ್ರಥಮ ದರ್ಜೆ ವೃತ್ತಿಜೀವನದ 25ನೇ ಶತಕ ಎಂಬುದು ಮತ್ತಷ್ಟು ವಿಶೇಷವಾಗಿತ್ತು.
ಈ ಗೆಲುವಿನೊಂದಿಗೆ ಕರ್ನಾಟಕ ಸೆಮಿಫೈನಲ್‌ಗೆ ತಲುಪಿದೆ. ಕೆಎಲ್ ರಾಹುಲ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಈ ಶತಕ ಬಾರಿಸಿದ್ದು ಅವರ ಬ್ಯಾಟಿಂಗ್ ಕೌಶಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿತ್ತು. ಏಕೆಂದರೆ ಟೆಸ್ಟ್ ಪಂದ್ಯದ ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸುವುದು ಅಷ್ಟು ಸುಲಭದ ಮಾತಲ್ಲ. ಆದರೆ ರಾಹುಲ್ ಈ ಕೆಲಸ ಮಾಡಿ ತಂಡವನ್ನು ಸೋಲಿನಿಂದ ಪಾರು ಮಾಡಿದರು. ಕೆಎಲ್ ರಾಹುಲ್ ತಮ್ಮ ಇನ್ನಿಂಗ್ಸ್‌ನಲ್ಲಿ 14 ಬೌಂಡರಿಗಳು ಮತ್ತು ಒಂದು ಸಿಕ್ಸ್ ಬಾರಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕುಶಿನಗರದಲ್ಲಿ ಪ್ರವಾಹದ ಸ್ಥಳಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಭೇಟಿ
ಪಂಚಮಸಾಲಿ ಗುರುಪೀಠದಲ್ಲಿ '10 ಕೋಟಿ ರೂ.' ಅನುದಾನ ದುರುಪಯೋಗ ಆರೋಪ
ಏನಾದ್ರೂ ಹೇಳಿದ್ರೆ ಅಳುತ್ತ ಕೂರ್ತೀಯ: ಶಾಸ್ತ್ರಿ ಮುಖವಾಡ ಬಯಲು ಮಾಡಿದ ಜಗ್ಗ
ಪಾಕ್ ಗಡಿ ಬಳಿ ಹೈವೇ ಮೇಲೆಯೇ ಲ್ಯಾಂಡ್ ಆದ ಭಾರತೀಯ ಸೇನಾ ಹೆಲಿಕಾಪ್ಟರ್!

