‘ಧುರಂಧರ್’ ಸಿನಿಮಾದ ಭಯಂಕರ ದೃಶ್ಯದ ಶೂಟಿಂಗ್ ಆಗಿದ್ದು ಹೀಗೆ.. ವಿಡಿಯೋ ನೋಡಿ

Updated on: Dec 26, 2025 | 10:46 PM

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ ಚಿತ್ರಕ್ಕೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಸಿನಿಮಾದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಸಹ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ತಯಾರಾಗಿದೆ. ರಣವೀರ್ ಸಿಂಗ್ ಅವರಿಗೆ ಈ ಸಿನಿಮಾದಿಂದ ದೊಡ್ಡ ಗೆಲುವು ಸಿಕ್ಕಿದೆ.

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್’ (Dhurandhar) ಸಿನಿಮಾಗೆ ‘ಎ’ ಪ್ರಮಾಣಪತ್ರ ನೀಡಲಾಗಿದೆ. ಈ ಚಿತ್ರದಲ್ಲಿ ಕ್ರೌರ್ಯದ ದೃಶ್ಯಗಳು ಇರುವುದು ಕೂಡ ‘ಎ’ ಪ್ರಮಾಣಪತ್ರ ಸಿಗಲು ಕಾರಣ. ರಣವೀರ್ ಸಿಂಗ್ (Ranveer Singh), ಅಕ್ಷಯ್ ಖನ್ನಾ, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​​ಪಾಲ್ ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ನೈಜ ಘಟನೆಗಳನ್ನು ಆಧರಿಸಿ ಈ ಸಿನಿಮಾ ತಯಾರಾಗಿದೆ. ಸಿನಿಮಾದಲ್ಲಿನ ಕೌರ್ಯದ ದೃಶ್ಯಗಳ ಬಗ್ಗೆ ಜನರು ಮಾತನಾಡುತ್ತಿದ್ದಾರೆ. ಆ ಪೈಕಿ ಒಂದು ದೃಶ್ಯದ ಶೂಟಿಂಗ್ ಯಾವ ರೀತಿ ನಡೆದಿತ್ತು ಎಂಬುದನ್ನು ಈ ವಿಡಿಯೋದಲ್ಲಿ ನೋಡಬಹುದು. ‘ಧುರಂಧರ್’ ಸಿನಿಮಾ ವಿಶ್ವಾದ್ಯಂತ 1000 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್ ಮಾಡಿ ಮುನ್ನುಗ್ಗುತ್ತಿದೆ. ರಣವೀರ್ ಸಿಂಗ್ ಅವರಿಗೆ ಈ ಚಿತ್ರರಿಂದ ದೊಡ್ಡ ಗೆಲುವು ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More