ಡಿಆರ್ಐ ಅಧಿಕಾರಿಗಳ ಕಸ್ಟಡಿ ಅಂತ್ಯ: ಗೋಲ್ಡ್ ಸ್ಮಗ್ಲಿಂಗ್ ಆರೋಪಿ ರನ್ಯಾ ರಾವ್ ಮತ್ತೆ ಜೈಲಿಗೆ
ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಅವರನ್ನು ಮೂರು ದಿನಗಳ ಕಾಲ ಡಿಆರ್ಐ ಅಧಿಕಾರಿಗಳ ಕಸ್ಟಡಿಗೆ ನೀಡಲಾಗಿತ್ತು. ಇಂದು (ಮಾ.10) ಡಿಆರ್ಐ ಕಸ್ಟಡಿ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ರನ್ಯಾ ಅವರನ್ನು ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ ಕಳಿಸಲಾಗಿದೆ.
ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ (Ranya Rao) ಅವರನ್ನು 3 ದಿನಗಳ ಕಾಲ ಡಿಆರ್ಐ ಅಧಿಕಾರಿಗಳ ಕಸ್ಟಡಿಗೆ ನೀಡಲಾಗಿತ್ತು. ಕಸ್ಟಡಿ ಅವಧಿ ಅಂತ್ಯವಾದ ಹಿನ್ನಲೆಯಲ್ಲಿ ಇಂದು (ಮಾರ್ಚ್ 10) ಅವರನ್ನು ಮತ್ತೆ ಪರಪ್ಪನ ಅಗ್ರಹಾರ (Parappana Agrahara) ಜೈಲಿಗೆ ಕಳಿಸಲಾಗಿದೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ರನ್ಯಾ ಜೊತೆ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದೆ. ಜಾಮೀನು ಸಿಗುವ ತನಕ ರನ್ಯಾ ಅವರು ಜೈಲಿನಲ್ಲೇ ಕಾಲ ಕಳೆಯಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
