ದಾರಿಯುದ್ಧಕ್ಕೂ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ: ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಬಂಧನ

Edited By:

Updated on: Mar 31, 2026 | 7:37 AM

ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಎಂಬಾತನನ್ನು ಬೆಂಗಳೂರಿನ ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಬಿಟಿಎಂ ಲೇಔಟ್‌ನಿಂದ ಇಂದಿರಾನಗರಕ್ಕೆ ತೆರಳುತ್ತಿದ್ದಾಗ, ಬೈಕ್‌ನಲ್ಲಿ ದಾರಿಯುದ್ದಕ್ಕೂ ಅಸಭ್ಯವಾಗಿ ವರ್ತಿಸಿದ ಕುರಿತು ಸಂತ್ರಸ್ತೆ ಯುವತಿ ದೂರು ನೀಡಿದ್ದರು. ಇದರ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗಿದೆ.

ಬೆಂಗಳೂರು, ಮಾರ್ಚ್​ 31: ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಪಿಡೋ ಬೈಕ್ ಚಾಲಕ ಮೊಹಮ್ಮದ್ ಖಾಜಾ ಎಂಬಾತನನ್ನು ಬೆಂಗಳೂರಿನ ಇಂದಿರಾನಗರ ಪೊಲೀಸರು ಬಂಧಿಸಿದ್ದಾರೆ. ಯುವತಿಯೊಬ್ಬರು ಬಿಟಿಎಂ ಲೇಔಟ್‌ನಿಂದ ಇಂದಿರಾನಗರಕ್ಕೆ ತೆರಳಲು ರಾಪಿಡೋ ಬೈಕ್ ಟ್ಯಾಕ್ಸಿ ಬುಕ್ ಮಾಡಿದ್ದರು. ಪ್ರಯಾಣದ ಸಂದರ್ಭದಲ್ಲಿ, ಚಾಲಕ ಮೊಹಮ್ಮದ್ ಖಾಜಾ ದಾರಿಯುದ್ದಕ್ಕೂ ಯುವತಿಯ ಮೈಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಈ ವರ್ತನೆಯಿಂದ ಅಸಮಾಧಾನಗೊಂಡ ಯುವತಿ ಇಂದಿರಾನಗರ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಇಂದಿರಾನಗರ ಪೊಲೀಸರು, ರಾಪಿಡೋ ಚಾಲಕ ಮೊಹಮ್ಮದ್ ಖಾಜಾನನ್ನು ಅರೆಸ್ಟ್ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More