ಖಗೋಳ ವಿಸ್ಮಯ: ವಿಜಯಪುರದಲ್ಲಿ ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣದ ಉಂಗುರ!

Edited By:

Updated on: Jun 20, 2026 | 2:56 PM

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಘೋಣಸಗಿ ಗ್ರಾಮದಲ್ಲಿ ಅಪರೂಪದ ಖಗೋಳ ವಿಸ್ಮಯವೊಂದು ಕಾಣಿಸಿದೆ. ಶನಿವಾರ ಬೆಳಿಗ್ಗೆ ಆಕಾಶದಲ್ಲಿ ಸೂರ್ಯನ ಸುತ್ತಲೂ ಸೃಷ್ಟಿಯಾದ ಆಕರ್ಷಕ ಸ್ವರ್ಣ ವರ್ಣದ ಉಂಗುರಾಕೃತಿಯನ್ನು (Sun Halo) ಕಂಡು ಸಾರ್ವಜನಿಕರು ಹಾಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಬೆರಗಾಗಿದ್ದಾರೆ. ಸೂರ್ಯನ ಸುತ್ತ ಸೃಷ್ಟಿಯಾದ ಸ್ವರ್ಣ ವರ್ಣದ ಉಂಗುರಾಕೃತಿಯ ವಿಡಿಯೋ ಇಲ್ಲಿದೆ.

ವಿಜಯಪುರ, ಜೂನ್ 20: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಘೋಣಸಗಿ ಗ್ರಾಮದ ಆಕಾಶದಲ್ಲಿ ಶನಿವಾರ ಬೆಳಿಗ್ಗೆ ಒಂದು ಅಪರೂಪದ ವಿಸ್ಮಯ ಕಾಣಿಸಿಕೊಂಡು ಜನರ ಗಮನ ಸೆಳೆದಿದೆ. ಬೆಳಿಗ್ಗೆ ಸುಮಾರು 10:30ರ ಸುಮಾರಿಗೆ ಸೂರ್ಯನ ಸುತ್ತಲೂ ಪ್ರಕಾಶಮಾನವಾದ ಸ್ವರ್ಣ ವರ್ಣದ ವೃತ್ತಾಕಾರದ ಉಂಗುರ ಮೂಡಿದೆ. ಈ ಆಕರ್ಷಕ ದೃಶ್ಯವನ್ನು ಕಂಡು ಜನಸಾಮಾನ್ಯರು ಕೌತುಕದಿಂದ ಆಕಾಶದತ್ತ ಮುಖ ಮಾಡಿದ್ದಾರೆ. ಘೋಣಸಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಈ ಅಪರೂಪದ ಉಂಗುರಾಕೃತಿಯನ್ನು ಕಂಡು ಅತ್ಯಂತ ಖುಷಿ ಪಟ್ಟರು. ಶಾಲೆಯ ಶಿಕ್ಷಕರಾದ ಪರಮೇಶ್ವರ ಗದ್ಯಾಳ ಅವರು ವಿದ್ಯಾರ್ಥಿಗಳಿಗೆ ಈ ಪ್ರಕೃತಿ ವಿಸ್ಮಯವನ್ನು ತೋರಿಸಿ, ಇದು ಹೇಗೆ ಸಂಭವಿಸುತ್ತದೆ ಎಂಬ ಕುರಿತ ವೈಜ್ಞಾನಿಕ ಮಾಹಿತಿ ನೀಡಿದರು. ವಾತಾವರಣದ ಮೇಲ್ಭಾಗದಲ್ಲಿರುವ ಹನಿಗಳು ಮತ್ತು ಮಂಜಿನ ಮೂಲಕ ಸೂರ್ಯನ ಬೆಳಕು ಹಾದುಹೋಗುವಾಗ ವಕ್ರೀಭವನಗೊಂಡು (Refraction) ಈ ರೀತಿಯ ‘ಸನ್ ಹ್ಯಾಲೋ (Sun Halo)’ ಅಥವಾ ಸೂರ್ಯನ ಉಂಗುರ ಸೃಷ್ಟಿಯಾಗುತ್ತದೆ ಎಂದು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Jun 20, 2026 12:28 PM
Loading...
Unable to load recommendations.
Follow Us
ಅಶೋಕ ಯಡಳ್ಳಿ, ವಿಜಯಪುರ

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More