ಸ್ಪಂದನಾ ನಿಧನದ ಬಳಿಕ ಹೇಗಿತ್ತು ವಿಜಯ್ ರಾಘವೇಂದ್ರ ಪರಿಸ್ಥಿತಿ? ಯಾರಿಗೂ ಬೇಡ ಈ ನೋವು

Updated on: Aug 20, 2023 | 1:19 PM

ವಿದೇಶದಲ್ಲಿ ಮಡಿದ ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ಕುಟುಂಬದವರು ಸಾಕಷ್ಟು ಕಷ್ಟಪಡಬೇಕಾಯಿತು. ಆ ಸಂದರ್ಭದಲ್ಲಿ ವಿಜಯ್​ ರಾಘವೇಂದ್ರ ಅವರು ಅನುಭವಿಸಿದ ಸಂಕಟ ಅಷ್ಟಿಷ್ಟಲ್ಲ. ಪತ್ನಿಯ ನಿಧನದ ಬಳಿಕ ಅವರ ಪರಿಸ್ಥಿತಿ ಹೇಗಿತ್ತು ಎಂಬುದನ್ನು ವಿವರಿಸುವ ವಿಡಿಯೋಗಳು ಲಭ್ಯವಾಗಿವೆ.

ನಟ ವಿಜಯ್​ ರಾಘವೇಂದ್ರ (Vijay Raghavendra) ಅವರು ಶೋಕದಲ್ಲಿ ಮುಳುಗಿದ್ದಾರೆ. ಅವರ ಪತ್ನಿ ಸ್ಪಂದನಾ ಹೃದಯಾಘಾತದಿಂದ (Heart Attack) ನಿಧನರಾಗಿದ್ದು ತೀವ್ರ ನೋವಿನ ಸಂಗತಿ. ಪ್ರೀತಿಸಿ ಮದುವೆಯಾದ ಪತ್ನಿ ಇನ್ನಿಲ್ಲ ಎಂದಾಗ ಆ ನೋವನ್ನು ಸಹಿಸಿಕೊಳ್ಳುವುದು ಅಸಾಧ್ಯ. ಆ ಸಂದರ್ಭದಲ್ಲಿ ವಿಜಯ್​ ರಾಘವೇಂದ್ರ ಅವರು ಅನುಭವಿಸಿದ ಸಂಕಟ ಅಷ್ಟಿಷ್ಟಲ್ಲ. ಪತ್ನಿಯ ನಿಧನದ ಬಳಿಕ ಅವರ ಪರಿಸ್ಥಿತಿ ಹೇಗಿತ್ತು ಎಂಬುದನ್ನು ವಿವರಿಸುವ ವಿಡಿಯೋಗಳು ಈಗ ಲಭ್ಯವಾಗಿವೆ. ವಿದೇಶದಲ್ಲಿ ಮಡಿದ ಸ್ಪಂದನಾ (Spandana Vijay Raghavendra) ಅವರ ಮೃತದೇಹವನ್ನು ಭಾರತಕ್ಕೆ ತರುವಲ್ಲಿ ವಿಜಯ್​ ರಾಘವೇಂದ್ರ ಕುಟುಂಬ ಸಾಕಷ್ಟು ಕಷ್ಟಪಡಬೇಕಾಯಿತು. ಆಗಸ್ಟ್​ 9ರಂದು ಸ್ಪಂದನಾ ಅವರ ಅಂತ್ಯಕ್ರಿಯೆ ನಡೆಯಿತು. ಆಗಸ್ಟ್​ 16ರಂದು ಉತ್ತರ ಕ್ರಿಯೆ ನೆರವೇರಿಸಲಾಯಿತು.

​ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More