ಫ್ಲೈ ಓವರ್ ಮೇಲೆ ಖಾಸಗಿ ಬಸ್ಗಳ ನಡುವೆ ರೇಸ್: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲೆ ಟೂರಿಸ್ಟ್ ಬಸ್ ಚಾಲಕರು ಅತಿವೇಗದಿಂದ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದಾರೆ. ನಾ ಮುಂದು ತಾ ಮುಂದು ಎಂಬಂತೆ ಬಸ್ಸುಗಳನ್ನು ಚಲಾಯಿಸಿ ಪ್ರಯಾಣಿಕರ ಜೀವಕ್ಕೆ ಅಪಾಯ ತಂದೊಡ್ಡಿದ್ದಾರೆ. ಬಸ್ಸುಗಳು ಒಂದಕ್ಕೊಂದು ಟಚ್ ಆಗಿದ್ದು, ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತ ತಪ್ಪಿದೆ. ಈ ಘಟನೆ ಬಸ್ ಚಾಲಕರ ಅಜಾಗರೂಕತೆಗೆ ಮತ್ತೊಂದು ನಿದರ್ಶನವಾಗಿದೆ.
ಆನೇಕಲ್, ಡಿಸೆಂಬರ್ 30: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್‌ನಲ್ಲಿ ಟೂರಿಸ್ಟ್ ಬಸ್ ಚಾಲಕರು ಅಜಾಗರೂಕ ಚಾಲನೆ ಮಾಡಿರುವುದು ಬೆಳಕಿಗೆ ಬಂದಿದೆ. ನಾ ಮುಂದು ತಾ ಮುಂದು ಎಂಬಂತೆ ಬಸ್ಸುಗಳನ್ನು ಚಾಲನೆ ಮಾಡುತ್ತಾ, ಪ್ರಯಾಣಿಕರ ಜೀವದ ಜೊತೆ ಹುಚ್ಚಾಟ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಘಟನೆಯಲ್ಲಿ ಬಸ್ಗಳು ಪರಸ್ಪರ ಟಚ್ ಆಗಿದ್ದು, ಸ್ವಲ್ಪ ಯಾಮಾರಿದರೂ ಬಸ್ಸುಗಳು ಫ್ಲೈ ಓವರ್‌ನಿಂದ ಕೆಳಗೆ ಬೀಳುವ ಸಾಧ್ಯತೆ ಹೆಚ್ಚಿತ್ತು ಎನ್ನಲಾಗಿದೆ. ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಇತ್ತೀಚೆಗೆ ಸರಣಿ ಬಸ್ ದುರಂತಗಳು ಸಂಭವಿಸಿ ಸಾವು-ನೋವುಗಳು ಸಂಭವಿಸುತ್ತಿದ್ದರೂ ಚಾಲಕರ ನಿರ್ಲಕ್ಷ್ಯ ಕಡಿಮೆ ಆಗಿಲ್ಲ ಎಂಬುದಕ್ಕೆ ಈ ಘಟನೆ ಮತ್ತೊಂದು ಸ್ಪಷ್ಟ ನಿದರ್ಶನ ಎಂಬಂತಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
