ಇದೇನ್ ರೇಸಿಂಗಾ! ಅಗರ ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್

Updated on: Feb 03, 2026 | 8:15 AM

ಬೆಂಗಳೂರಿನ ಅಗರ ಫ್ಲೈಓವರ್ ಮೇಲೆ ಅತಿವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಕಾರ್ ಡ್ರೈವರ್‌ನಿಂದಾಗಿ, ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಭಾರೀ ಅಪಾಯದಿಂದ ಪಾರಾಗಿದ್ದಾನೆ. ಓವರ್‌ಟೇಕ್ ಮಾಡುವಾಗ ಸಂಭವಿಸಿದ ಈ ಘಟನೆ ಹಿಂಬದಿ ಕಾರ್ ಕ್ಯಾಮರಾದಲ್ಲಿ ಸೆರೆಯಾಗಿದೆ. ರ‍್ಯಾಶ್ ಡ್ರೈವಿಂಗ್‌ನಿಂದ ಸಂಭವಿಸಬಹುದಾದ ಅನಾಹುತವನ್ನು ಇದು ಎತ್ತಿ ತೋರಿಸುತ್ತದೆ.

ಬೆಂಗಳೂರು, ಫೆಬ್ರವರಿ 3: ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್ ಮತ್ತು ಕೋರಮಂಗಲವನ್ನು ಸಂಪರ್ಕಿಸುವ ಅಗರ ಫ್ಲೈಓವರ್ ಮೇಲೆ ಇತ್ತೀಚೆಗೆ ನಡೆದ ಅತಿವೇಗದ ಮತ್ತು ಅಜಾಗರೂಕ ಕಾರು ಚಾಲನೆಯ ದೃಶ್ಯವು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಒಂದು ಕಾರನ್ನು ಅತಿವೇಗದಿಂದ ಹಾಗೂ ನಿರ್ಲಕ್ಷ್ಯದಿಂದ ಚಲಾಯಿಸಲಾಗಿದ್ದು, ಬೈಕ್ ಸವಾರನೊಬ್ಬ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಕಾರು ಚಾಲಕನು ಓವರ್‌ಟೇಕ್ ಮಾಡಲು ಯತ್ನಿಸಿದಾಗ ಈ ಘಟನೆ ನಡೆದಿದೆ. ಈ ಘಟನೆಯ ದೃಶ್ಯವು ಹಿಂಬದಿಯಲ್ಲಿ ಬರುತ್ತಿದ್ದ ಇನ್ನೊಂದು ಕಾರಿನ ಕ್ಯಾಮರಾದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More