ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ ವಿಡಿಯೋ

Updated on: Jan 13, 2026 | 9:49 AM

ನಟಿ ರಾಶಿಕಾ ಶೆಟ್ಟಿ ಅವರು ಇಷ್ಟು ದಿನ ಬಿಗ್ ಬಾಸ್ ಮನೆಯಲ್ಲಿ ಇದ್ದರು. ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿ ಬಳಗ ಹಿರಿದಾಗಿದೆ. ಈಗ ಗಿಲ್ಲಿ ನಟ ಅವರು ಸರ್​​ಪ್ರೈಸ್ ಪಾರ್ಟಿ ನೀಡಿದ್ದಾರೆ. ಕುಟುಂಬದವರೇ ಇದನ್ನು ಆಯೋಜನೆ ಮಾಡಿದ್ದರು. ಆ ವಿಡಿಯೋ ವೈರಲ್ ಆಗಿದೆ. 

ಬಿಗ್ ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ರಾಶಿಕಾ ಶೆಟ್ಟಿ ಅವರು ಫಿನಾಲೆಗೂ ಮೊದಲು ಎಲಿಮಿನೇಟ್ ಆಗಿದ್ದಾರೆ. ಟಾಸ್ಕ್ ಕ್ವೀನ್ ಎಂದೇ ಫೇಮಸ್ ಆಗಿದ್ದ ಅವರು, ಅದ್ಭುತವಾಗಿ ಟಾಸ್ಕ್ ಆಡುತ್ತಿದ್ದರು. ಅವರಿಗೆ ಈಗ ಸರ್​​ಪ್ರೈಸ್ ಸಿಕ್ಕಿದೆ. ಕುಟುಂಬದವರು ರಾಶಿಕಾಗೋಸ್ಕರ ಸರ್​​ಪ್ರೈಸ್ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿ ಅದ್ದೂರಿಯಾಗಿತ್ತು. ಆ ಕ್ಷಣವನ್ನು ರಾಶಿಕಾ ಸಂಭ್ರಮಿಸಿದರು. ಆ ಸಂದರ್ಭದ ವಿಡಿಯೋ ಮೇಲಿದೆ.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More