ಸೀಸನ್ ಚಪ್ಪಾಳೆಯಲ್ಲಿ ಧ್ರುವಂತ್ ಹೆಸರನ್ನು ನಿರೀಕ್ಷಿಸಿರಲಿಲ್ಲ; ರಾಶಿಕಾ

Updated on: Jan 14, 2026 | 9:56 AM

ರಾಶಿಕಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗಿದ್ದಾರೆ. ಅವರು ಹಲವು ವಿಷಯಗಳ ಕುರಿತು ನೇರವಾಗಿ ಮಾತನಾಡಿದ್ದಾರೆ. ಸೀಸನ್ ಚಪ್ಪಾಳೆ ಧ್ರುವಂತ್​ಗೆ ಸಿಕ್ಕಿದ್ದರ ಬಗ್ಗೆ ಅವರು ತಮ್ಮ ಅಭಿಪ್ರಾಯ ಹೇಳಿದರು. ಅವರು ಧ್ರುವಂತ್ ಹೆಸರನ್ನು ನಿರೀಕ್ಷಿಸಿರಲಿಲ್ಲವಂತೆ. ಆ ಬಗ್ಗೆ ಇಲ್ಲಿದೆ ವಿವರ.

‘ಬಿಗ್ ಬಾಸ್ ಕನ್ನಡ ಸೀಸನ್ 12’ರ ಸ್ಪರ್ಧಿಯಾಗಿದ್ದ ರಾಶಿಕಾ ಶೆಟ್ಟಿ ಅವರು ಎಲಿಮಿನೇಟ್ ಆಗಿದ್ದಾರೆ. ಈ ವಿಷಯ ಅವರ ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಅವರು ಬಿಗ್ ಬಾಸ್ ಮನೆಯ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಧ್ರುವಂತ್​​ಗೆ ಕಿಚ್ಚನ ಚಪ್ಪಾಳೆ ಸಿಕ್ಕ ವಿಷಯವನ್ನೂ ಅವರು ಪ್ರಸ್ತಾಪಿಸಿದ್ದಾರೆ. ‘ಧ್ರುವಂತ್​​ಗೆ ಸೀಸನ್ ಚಪ್ಪಾಳೆ ಸಿಗಬಹುದು ಎಂದು ನಾನು ಭಾವಿಸಿರಲಿಲ್ಲ’ ಎಂದಿದ್ದಾರೆ ರಾಶಿಕಾ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More