ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ

Updated on: Apr 05, 2026 | 2:08 PM

ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಆ ಪೈಕಿ ‘ರಣಬಾಲಿ’ ಸಿನಿಮಾ ಹೆಚ್ಚು ನಿರೀಕ್ಷೆ ಮೂಡಿಸಿದೆ. ಈ ಚಿತ್ರದಲ್ಲಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ನಟಿಸುತ್ತಿದ್ದಾರೆ. ರಶ್ಮಿಕಾ ಜನ್ಮದಿನಕ್ಕೆ ಈ ಸಿನಿಮಾದ ಮೇಕಿಂಗ್ ವಿಡಿಯೋ ಹಂಚಿಕೊಳ್ಳಲಾಗಿದೆ.

ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಇಂದು (ಏಪ್ರಿಲ್ 5) 30ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಈ ಬಾರಿಯ ಹುಟ್ಟುಹಬ್ಬ ರಶ್ಮಿಕಾ ಪಾಲಿಗೆ ಅತ್ಯಂತ ವಿಶೇಷವಾಗಿದೆ. ಏಕೆಂದರೆ ನಟ ವಿಜಯ್ ದೇವರಕೊಂಡ ಅವರೊಂದಿಗೆ ವಿವಾಹವಾದ ನಂತರ ಆಚರಿಸಿಕೊಳ್ಳುತ್ತಿರುವ ಮೊದಲ ಜನ್ಮದಿನ ಇದಾಗಿದೆ. ಈ ದಿನದಂದು ಪತಿ ವಿಜಯ್ ದೇವರಕೊಂಡ (Vijay Deverakonda) ಅವರು ‘ರಣಬಾಲಿ’ ಸಿನಿಮಾದ ಮೇಕಿಂಗ್ ವಿಡಿಯೋ ಹಂಚಿಕೊಳ್ಳುವ ಮೂಲಕ ರಶ್ಮಿಕಾಗೆ ಶುಭ ಕೋರಿದ್ದಾರೆ. ಈ ಚಿತ್ರದಲ್ಲಿ ವಿಜಯ್ ಮತ್ತು ರಶ್ಮಿಕಾ ಜೋಡಿಯಾಗಿ ನಟಿಸುತ್ತಿದ್ದಾರೆ. ರಶ್ಮಿಕಾ ಅವರು ಜಯಮ್ಮ ಎಂಬ ಪಾತ್ರವನ್ನು ಮಾಡುತ್ತಿದ್ದಾರೆ. ಹಾಗಾಗಿ ಈ ವಿಡಿಯೋ ಹಂಚಿಕೊಂಡಿರುವ ವಿಜಯ್ ಅವರು, ‘ಐ ಲವ್ ಯೂ ಜಯಮ್ಮ’ ಎಂದು ಕ್ಯಾಪ್ಷನ್ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More