Pushpa Movie: ರಶ್ಮಿಕಾ, ಅಲ್ಲು ಅರ್ಜುನ್​ ನಟನೆಯ ‘ಪುಷ್ಪ’ ಸುದ್ದಿಗೋಷ್ಠಿ ಲೈವ್​ ನೋಡಲು ಇಲ್ಲಿ ಕ್ಲಿಕ್​ ಮಾಡಿ

Allu Arjun | Rashmika Mandanna: ‘ಅಲಾ ವೈಕುಂಠಪುರಮುಲೋ' ಸಿನಿಮಾ ನಂತರ ಅಲ್ಲು ಅರ್ಜುನ್​ ‘ಪುಷ್ಪ' ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ‘ಪುಷ್ಪ' ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

TV9kannada Web Team

| Edited By: Rajesh Duggumane

Dec 15, 2021 | 1:52 PM

‘ಪುಷ್ಪ’ ಸಿನಿಮಾ ಡಿಸೆಂಬರ್​ 17ರಂದು ತೆರೆಗೆ ಬರುತ್ತಿದೆ. ಈ ಚಿತ್ರಕ್ಕೆ ಈಗಾಗಲೇ ಸಾಕಷ್ಟು ಪ್ರಚಾರ ನೀಡಲಾಗಿದೆ. ಹೈದರಾಬಾದ್​, ಚೆನ್ನೈ ಮೊದಲಾದ ಕಡೆಗಳಲ್ಲಿ ಚಿತ್ರದ ಪ್ರಚಾರ ಕಾರ್ಯ ನಡೆಯುತ್ತಿದೆ. ಈಗ ಬೆಂಗಳೂರಿಗೆ ಸಿನಿಮಾ ತಂಡ ಆಗಮಿಸಿದೆ. ಈ ವೇಳೆ ಚಿತ್ರತಂಡ ಸಿನಿಮಾ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ. ರಶ್ಮಿಕಾ ಮಂದಣ್ಣ ಮೊದಲಾದವರು ಆಗಮಿಸಿದ್ದು ವಿಶೇಷವಾಗಿತ್ತು. ಹಾಗಾದರೆ, ಸಿನಿಮಾ ಬಗ್ಗೆ ಏನೆಲ್ಲ ಹೇಳಿದರು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

‘ಅಲಾ ವೈಕುಂಠಪುರಮುಲೋ’ ಸಿನಿಮಾ ನಂತರ ಅಲ್ಲು ಅರ್ಜುನ್​ ‘ಪುಷ್ಪ’ ಸಿನಿಮಾ ಮೂಲಕ ಮತ್ತೆ ತೆರೆಮೇಲೆ ಬರೋಕೆ ಸಿದ್ಧರಾಗಿದ್ದಾರೆ. ತೆಲುಗಿನ ಖ್ಯಾತ ನಿರ್ದೇಶಕ ಸುಕುಮಾರ್​ ‘ಪುಷ್ಪ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. 2018ರಲ್ಲಿ ತೆರೆಕಂಡ ‘ರಂಗಸ್ಥಲಂ’ ಚಿತ್ರದ ನಂತರ ಅವರು ಕೈಗೆತ್ತಿಕೊಂಡಿರುವ ಮುಂದಿನ ಚಿತ್ರ ಇದಾಗಿದೆ. ‘ಪುಷ್ಪ’ ಚಿತ್ರ ಕಾಡಿನ ಹಿನ್ನೆಲೆ ಹೊಂದಿದೆ. ಶೇಷಾಚಲಂನ ಅರಣ್ಯದಲ್ಲಿ ನಡೆಯುತ್ತಿದ್ದ ರಕ್ತ ಚಂದನದ ಕಳ್ಳ ಸಾಗಾಣಿಕೆ ಬಗ್ಗೆ ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್​ ಟ್ರಕ್​ ಡ್ರೈವರ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Pushpa: The Rise: ‘ಪುಷ್ಪ ಚಿತ್ರ ನಾಲ್ಕು ಸಿನಿಮಾಗಳಿಗೆ ಸರಿಸಮ’: ಅಲ್ಲು ಅರ್ಜುನ್ ಹೀಗೆ ಹೇಳಿದ್ದೇಕೆ?

Follow us on

Click on your DTH Provider to Add TV9 Kannada