ಕನ್ನಡ ಇಂಡಸ್ಟ್ರಿಯಲ್ಲಿ ರಶ್ಮಿಕಾ ಮಂದಣ್ಣ ಬ್ಯಾನ್ ವಿಚಾರ: ಶಿವಣ್ಣ ಪ್ರತಿಕ್ರಿಯೆ ಏನು?
ನಟಿ ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಎಂಬ ಮಾಧ್ಯಮದವ ಪ್ರಶ್ನೆಗೆ ನಟ ಶಿವರಾಜ್ ಕುಮಾರ್ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ.
ಎ. ಹರ್ಷ ನಿರ್ದೇಶನದ, ನಟ ಶಿವರಾಜ್ಕುಮಾರ್ ಅಭಿನಯದ ‘ವೇದ’ (Veda movie) ಚಿತ್ರ ರಿಲೀಸ್ಗೆ ರೆಡಿಯಾಗಿದೆ. ಹುಬ್ಬಳ್ಳಿಯಲ್ಲಿ ಇಂದು (ಡಿ. 14) ವೇದ ಚಿತ್ರದ ಪ್ರೀ ರಿಲೀಸ್ ಇವೆಂಟ್ ನಡೆಯಿತು. ಬಳಿಕ ಶಿವರಾಜ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ನಟಿ ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಇಂಡಸ್ಟ್ರಿಯಿಂದ ಬ್ಯಾನ್ ಮಾಡಬೇಕು ಎಂದೆಲ್ಲ ಮಾತುಗಳು ಕೇಳಿಬಂದಿದ್ದು. ಈ ವಿಚಾರವಾಗಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಪ್ರತಿಕ್ರಿಯೆ ಕೂಡ ನೀಡಿದ್ದರು. ಸದ್ಯ ಈ ವಿಚಾರವಾಗಿ ಶಿವರಾಜ್ ಕುಮಾರ್ ಮಾತನಾಡಿದ್ದು, ‘ನಾನು ಸಿನಿಮಾಗಳು ಚೆನ್ನಾಗಿ ಓಡುತ್ತಿದ್ದೇಯಾ ಎಂದು ನೋಡುತ್ತೇನೆ ಹೊರತು, ಕಾಂಟ್ರವರ್ಸಿ ನೋಡುವುದಿಲ್ಲ’ ಎಂದು ಖಡಕ್ ಆಗಿ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us