ಪುನೀತ್ ನಿಧನದ ಬಗ್ಗೆ ರಶ್ಮಿಕಾ ಮಂದಣ್ಣ ಕೊಟ್ಟ ರಿಯಾಕ್ಷನ್ ಏನು? ಇಲ್ಲಿದೆ ವಿಡಿಯೋ
ಜಾಹೀರಾತೊಂದರ ಕೆಲಸಕ್ಕೆ ಬೆಂಗಳೂರಿಗೆ ಆಗಮಿಸಿದ್ದರು ರಶ್ಮಿಕಾ. ಈ ವೇಳೆ ಪುನೀತ್ ನಿಧನದ ಬಗ್ಗೆ ಕೇಳಲಾಯಿತು. ಇದಕ್ಕೆ ರಶ್ಮಿಕಾ ಪ್ರತಿಕ್ರಿಯಿಸಿದ್ದು ಹೇಗಿತ್ತು ಎಂಬುದನ್ನು ವಿಡಿಯೋದಲ್ಲಿ ನೋಡಿ.
ರಶ್ಮಿಕಾ ಮಂದಣ್ಣ ಈಗ ಯಶಸ್ಸಿನ ಉತ್ತುಂಗದಲ್ಲಿದ್ದಾರೆ. ಎಲ್ಲ ಭಾಷೆಯ ಚಿತ್ರರಂಗದಲ್ಲೂ ಸ್ಟಾರ್ ನಟರ ಸಿನಿಮಾಗಳಿಗೆ ಅವರೇ ನಾಯಕಿ ಆಗಬೇಕು ಎಂದು ನಿರ್ಮಾಪಕರು ಬೇಡಿಕೆ ಇಡುತ್ತಿದ್ದಾರೆ. ತೆಲುಗು, ತಮಿಳು ಮಾತ್ರವಲ್ಲದೇ ಹಿಂದಿಯಲ್ಲೂ ಅವರ ಹವಾ ಹೆಚ್ಚಿದೆ. ಅಮಿತಾಭ್ ಬಚ್ಚನ್, ಸಿದ್ದಾರ್ಥ್ ಮಲ್ಹೋತ್ರಾ ಅವರಂತಹ ಸ್ಟಾರ್ ಕಲಾವಿದರ ಜೊತೆ ತೆರೆಹಂಚಿಕೊಳ್ಳುವ ಚಾನ್ಸ್ ರಶ್ಮಿಕಾ ಮಂದಣ್ಣಗೆ ಸಿಕ್ಕಿದೆ. ಸಿನಿಮಾ ಕೆಲಸಗಳ ಮಧ್ಯೆ ಜಾಹೀರಾತು ಕೆಲಸಗಳಲ್ಲೂ ಬ್ಯುಸಿ ಆಗಿದ್ದಾರೆ. ಅವರು ಜಾಹೀರಾತೊಂದರ ಕೆಲಸಕ್ಕೆ ಬೆಂಗಳೂರಿಗೆ ಆಗಮಿಸಿದ್ದರು. ಈ ವೇಳೆ ಪುನೀತ್ ನಿಧನದ ಬಗ್ಗೆ ಕೇಳಲಾಯಿತು. ಇದಕ್ಕೆ ರಶ್ಮಿಕಾ ಪ್ರತಿಕ್ರಿಯಿಸಿದ್ದು ಹೇಗಿತ್ತು ಎಂಬುದನ್ನು ವಿಡಿಯೋದಲ್ಲಿ ನೋಡಿ. ಪುನೀತ್ ಅವರ ಅಂತಿಮ ದರ್ಶನ ಪಡೆಯೋಕೆ ರಶ್ಮಿಕಾ ಬೆಂಗಳೂರಿಗೆ ಆಗಮಿಸಿದ್ದರು. ಕೊನೆಯ ಕ್ಷಣದಲ್ಲಿ ಅವರು ಅಂತಿಮ ದರ್ಶನ ಪಡೆದು ತೆರಳಿದ್ದರು. ರಶ್ಮಿಕಾ ಹಾಗೂ ಪುನೀತ್ ‘ಅಂಜನಿ ಪುತ್ರ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು.
ಇದನ್ನೂ ಓದಿ: Rashmika Mandanna: ಮುಂಬೈನಲ್ಲಿ ಹೆಚ್ಚಿದೆ ರಶ್ಮಿಕಾ ಮಂದಣ್ಣ ತಿರುಗಾಟ; ಕೊಡಗಿನ ಕುವರಿ ಹೋದಲ್ಲೆಲ್ಲ ಕ್ಯಾಮೆರಾ ಕಣ್ಣು
Published on: Nov 19, 2021 05:37 PM
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

