ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಪರಿಚಯಿಸಿದ ಕಲಾವಿದೆ ರಶ್ಮಿಕಾ ಮಂದಣ್ಣ: ಭಾ.ಮ. ಹರೀಶ್
ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ ಕುರಿತಾಗಿ ಬೇಸರ ವ್ಯಕ್ತಪಡಿಸಿದ ವಾಣಿಜ್ಯ ಮಂಡಳಿಯ ಅಧ್ಯಕ್ಷ ಬಾಮಾ ಹರೀಶ್.
ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕನ್ನಡ ಚಿತ್ರರಂಗದಲ್ಲಿ ತಮ್ಮ ಸಿನಿ ಜರ್ನಿಯನ್ನ ಆರಂಭಿಸಿ ನ್ಯಾಷನಲ್ ಕ್ರಷ್ ಆಗಿ ಗುರುತಿಸಿಕೊಂಡಿರುವವರು. ಇತ್ತೀಚೆಗೆ ಸಂದರ್ಶನ ಒಂದರಲ್ಲಿ ತಾವು ಅಭಿನಯಿಸಿದ ಚಿತ್ರದ ನಿರ್ಮಾಣ ಸಂಸ್ಥೆಯ ಹೆಸರನ್ನು ಹೇಳದೆ ಎಡವಟ್ಟು ಮಾಡಿಕೊಂಡಿದ್ದರು. ಇದಕ್ಕೆ ನಟ ರಿಷಬ್ ಶೆಟ್ಟಿ ಕೂಡ ತಮ್ಮದೆ ಶೈಲಿಯಲ್ಲಿ ಉತ್ತರ ನೀಡಿದ್ದರು. ಬಳಿಕ ರಶ್ಮಿಕಾ ಮಂದಣ್ಣ ಅವರನ್ನು ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಮಾತುಗಳು ಕೇಳಿಬಂದವು. ಸದ್ಯ ಈ ಕುರಿತಾಗಿ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ. ಮ. ಹರೀಶ್ ಮಾತನಾಡಿದ್ದಾರೆ. ನಾನು ಕೂಡ ರಶ್ಮಿಕಾ ಮಂದಣ್ಣ ಅವರ ಅಭಿಮಾನಿ. ಆದರೂ ನನಗೆ ಅವರ ಬಗ್ಗೆ ನೋವುಯಿದೆ ಎಂದು ಭಾ. ಮ. ಹರೀಶ್ ಮಾತು ಆರಂಭಿಸಿದರು. ನಟರಾದ ರಕ್ಷಿತ್ ಶೆಟ್ಟಿ ಮತ್ತು ರಿಷಬ್ ಶೆಟ್ಟಿ ಪರಿಚಯಿಸಿದ ಒಳ್ಳೆಯ ಕಲಾವಿದೆ ರಶ್ಮಿಕಾ ಮಂದಣ್ಣ. ಅವರ ಹೆಸರು ಹೇಳದಿರುವುದು ನನಗೆ ಬಳಹ ನೋವು ತಂದಿದೆ ಎಂದರು ಭಾ. ಮ. ಹರೀಶ್.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

