ವಿವಾದಿತ ಬಸವ ಮಂಟಪ ಪುಸ್ತಕದ ಲೇಖಕ ರವಿ ಹಂಜ್ ಬಂಧನ, ಕಾನೂನು ಹೋರಾಟದ ಮಾತು

Updated on: Nov 21, 2026 | 4:51 PM

ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಬಸವ ಮಂಟಪ ಪುಸ್ತಕದ ಲೇಖಕ ರವಿ ಹಂಚ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಬೆಳಗಾವಿಯಲ್ಲಿ ದಾಖಲಾದ ಪ್ರಕರಣದ ಹಿನ್ನೆಲೆಯಲ್ಲಿ ಲುಕ್​ಔಟ್ ನೋಟಿಸ್ ಹೊರಡಿಸಲಾಗಿತ್ತು. ಕಾನೂನನ್ನು ಗೌರವಿಸುವುದಾಗಿ ಹೇಳಿದರೂ, ಸರ್ಕಾರದ ಹಸ್ತಕ್ಷೇಪದಿಂದ ನ್ಯಾಯ ಸಿಗುವ ನಂಬಿಕೆಯಿಲ್ಲ ಎಂದು ರವಿ ಹಂಚ್ ತಿಳಿಸಿದ್ದಾರೆ. ತಮ್ಮ ಹೋರಾಟ ಮುಂದುವರಿಸುವುದಾಗಿ ಅವರು ಪ್ರತಿಪಾದಿಸಿದ್ದಾರೆ.

ಕೊಚ್ಚಿ, ನವೆಂಬರ್ 21: ಬಸವ ಮಂಟಪ ಪುಸ್ತಕದ ಕುರಿತು ಉಂಟಾದ ವ್ಯಾಪಕ ವಿವಾದದ ಬೆನ್ನಲ್ಲೇ, ಲೇಖಕ ರವಿ ಹಂಜ್ ಅವರನ್ನು ಕೇರಳದ ಕೊಚ್ಚಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದೆ. ವಿದೇಶಕ್ಕೆ ತೆರಳಲು ಮುಂದಾಗಿದ್ದ ರವಿ ಹಂಜ್, ಲುಕ್​ಔಟ್ ನೋಟಿಸ್ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿಯ ವಶಕ್ಕೆ ಸಿಕ್ಕಿಬಿದ್ದಿದ್ದಾರೆ. ಬೆಳಗಾವಿ ಪೊಲೀಸರಿಗೆ ಈ ಕುರಿತು ಮಾಹಿತಿ ನೀಡಲಾಗಿದೆ.

ಪುಸ್ತಕದಲ್ಲಿನ ವಿಷಯಗಳ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಸರ್ಕಾರ ಪುಸ್ತಕವನ್ನು ಮುಟ್ಟುಗೋಲು ಹಾಕಿಕೊಂಡಿದ್ದರೂ, ರವಿ ಹಂಚ್ ಕ್ಷಮೆಯಾಚಿಸಿ, ಪುಸ್ತಕವನ್ನು ಮರುಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಇದು ಬಸವಣ್ಣನವರ ಅನುಯಾಯಿಗಳಲ್ಲಿ ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿತ್ತು. ಟಿವಿ9 ಜೊತೆ ಮಾತನಾಡಿರುವ ರವಿ ಹಂಚ್, “ನನ್ನನ್ನು ಕೊಚ್ಚಿ ಏರ್‌ಪೋರ್ಟ್‌ನಲ್ಲಿ ವಶಕ್ಕೆ ಪಡೆದಿದ್ದಾರೆ. ನಾನು ಈ ನೆಲದ ಕಾನೂನಿಗೆ ಗೌರವ ಕೊಡುತ್ತೇನೆ. ತನ್ನ ಹೋರಾಟ ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ. ಸರ್ಕಾರದ ಮಂತ್ರಿಗಳು ಈ ವಿಚಾರದಲ್ಲಿ ಭಾಗಿಯಾಗಿರುವುದರಿಂದ, ವಿಚಾರಣೆ ನ್ಯಾಯಬದ್ಧವಾಗಿ ಆಗುತ್ತದೆ ಎಂಬ ನಂಬಿಕೆ ತಮಗಿಲ್ಲ ಎಂದೂ ಅವರು ಅಭಿಪ್ರಾಯಪಟ್ಟಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Nov 21, 2026 04:45 PM
Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More