AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್

‘ಸಿಂಪತಿ ಬೇಡ, ಸೋಲು ಪದ ಕೇಳಿದ್ರೆ ಸಿಟ್ಟು ಬರುತ್ತೆ’; ರವಿಚಂದ್ರನ್

ರಾಜೇಶ್ ದುಗ್ಗುಮನೆ
|

Updated on:May 30, 2026 | 8:33 AM

Share

ನಟ ರವಿಚಂದ್ರನ್ ಅವರು ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಿರ್ದೇಶನದಲ್ಲೂ ಅನುಭವ ಇದೆ. ನಟನೆಯಲ್ಲಿ ಅವರಿಗೆ ಇರೋ ಅನುಭವ ತುಂಬಾನೇ ದೊಡ್ಡದು. ಈ ಮೊದಲು ನೀಡಿದ್ದ ಸಂದರ್ಶನ ಒಂದರಲ್ಲಿ ಅವರು ಸೋಲು ಹಾಗೂ ಗೆಲುವಿನ ಬಗ್ಗೆ ಮಾತನಾಡಿದ್ದರು. ಸೋಲಿನ ವಿಷಯ ಏಕೆ ಕೋಪ ತರಿಸುತ್ತದೆ ಎಂಬುದನ್ನು ಅವರು ಹೇಳಿದ್ದರು.

ಹಿರಿಯ ನಟ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನ. ಅವರು ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ನಿರ್ದೇಶನದಲ್ಲಿ ಅವರಿಗೆ ತುಂಬಾನೇ ಅನುಭವ ಇದೆ. ಅವರ ಜನ್ಮದಿನದ ಪ್ರಯುಕ್ತ ಅವರ ಹಳೆಯ ಸಂದರ್ಶನ ನೆನಪಿಸಿಕೊಳ್ಳೋ ಸಮಯ. ಟಿವಿ9 ಜೊತೆ ಮಾತನಾಡಿದ್ದ ಅವರು, ‘ಸೋಲು’ ಎಂಬ ಪದದ ಬಗ್ಗೆ ಮಾತನಾಡಿದ್ದರು. ‘ಸೋಲು ಎಂಬ ಶಬ್ದ ಕೇಳಿದರೆ ನನಗೆ ಸಿಟ್ಟು ಬರುತ್ತದೆ. ಸೋಲಿನಿಂದ ನಾನು ದುಡ್ಡು ಕಳೆದಿಲ್ಲ. ಬದಲಿಗೆ ಒಂದಷ್ಟು ವಿಷಯಗಳನ್ನು ಕಲಿತಿದ್ದೇನೆ. ಅದು ನನ್ನ ಹೆಗಲಮೇಲಿದೆ. ಅದನ್ನು ಕೇಳಿದರೆ ನನಗೆ ಸಿಟ್ಟು ಬರುತ್ತದೆ. ನನ್ನ ನೋವನ್ನು ಶೇರು ಮಾಡಿಕೊಳ್ಳೋದು ಬೇಡ. ನನಗೆ ಸಿಂಪತಿ ಕೊಡೋದು ಬೇಡ. ಸಿನಿಮಾ ಚೆನ್ನಾಗಿದ್ದರೆ ಮಾತ್ರ ಗೆಲ್ಲಿಸಿ’ ಎಂದಿದ್ದರು ಅವರು.

 

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: May 30, 2026 08:33 AM
Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More