‘ನಿದ್ರಾದೇವಿ ನೆಕ್ಸ್ಟ್​​ ಡೋರ್’ ಚಿತ್ರಕ್ಕೆ ಸಾಥ್ ಕೊಟ್ಟ ಕ್ರೇಜಿಸ್ಟಾರ್ ರವಿಚಂದ್ರನ್

‘ನಿದ್ರಾದೇವಿ ನೆಕ್ಸ್ಟ್​​ ಡೋರ್’ ಚಿತ್ರಕ್ಕೆ ಸಾಥ್ ಕೊಟ್ಟ ಕ್ರೇಜಿಸ್ಟಾರ್ ರವಿಚಂದ್ರನ್

ರಾಜೇಶ್ ದುಗ್ಗುಮನೆ
|

Updated on: Feb 27, 2024 | 11:29 AM

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರ ಇತ್ತೀಚೆಗೆ ಸೆಟ್ಟೇರಿದೆ. ಬೆಂಗಳೂರಿನ ಬನಶಂಕರಿಯಲ್ಲಿರುವ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ. ಹಿರಿಯ ನಟ ರವಿಚಂದ್ರನ್ ಅವರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಕ್ಲ್ಯಾಪ್ ಮಾಡಿ ತಂಡದ ಬೆನ್ನು ತಟ್ಟಿದ್ದಾರೆ.

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಸಿನಿಮಾ ಇತ್ತೀಚೆಗೆ ಸೆಟ್ಟೇರಿದೆ. ಬೆಂಗಳೂರಿನ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆದಿದೆ. ಕನ್ನಡದ ಹಿರಿಯ ನಟ ರವಿಚಂದ್ರನ್  (Ravichandran) ಅವರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿ ಚಿತ್ರತಂಡಕ್ಕೆ ಆಲ್​ ದಿ ಬೆಸ್ಟ್ ಹೇಳಿದ್ದಾರೆ. ಕ್ಲ್ಯಾಪ್ ಮಾಡಿ ತಂಡದ ಬೆನ್ನು ತಟ್ಟಿದ್ದಾರೆ. ಪ್ರವೀರ್ ಶೆಟ್ಟಿ ಹಾಗೂ ರಿಷಿಕಾ ನಾಯಕ್ ಈ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಸುರಾಗ್ ಸಾಗರ್ ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಪ್ರವೀರ್ ಶೆಟ್ಟಿ ಜೊತೆಗೆ ಶೈನ್ ಶೆಟ್ಟಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ ಅನ್ನೋದು ವಿಶೇಷ. ಇಬ್ಬರು ನಿದ್ದೆ ಇಲ್ಲದವರ ಜರ್ನಿಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆ. ಅವರಿಗೆ ಯಾಕೆ ನಿದ್ದೆ ಬರಲ್ಲ. ಇದಕ್ಕೆ ಪರಿಹಾರ ಏನು ಎಂಬಿತ್ಯಾದಿ ವಿಚಾರಗಳನ್ನು ಫನ್ ಆಗಿ ಕಟ್ಟಿಕೊಡಲಿದ್ದಾರೆ ಸುರಾಗ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ