ನಿರ್ಮಾಪಕ ಕೆ. ಮಂಜು ಮಗ ಈಗ ‘ದಿಲ್​ದಾರ್​’; ಚಿತ್ರಕ್ಕೆ ಸಾಥ್ ನೀಡಿದ ರವಿಚಂದ್ರನ್

Updated on: Apr 01, 2023 | 8:37 AM

‘ದಿಲ್​ದಾರ್’ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. ರವಿಚಂದ್ರನ್ ಅವರು ಬಂದು ತಂಡಕ್ಕೆ ಶುಭಕೋರಿದರು. ಆ ವಿಡಿಯೋ ಇಲ್ಲಿದೆ.

‘ಪಡ್ಡೆಹುಲಿ’, ‘ರಾಣಾ’ ಮೊದಲಾದ ಸಿನಿಮಾಗಳಲ್ಲಿ ನಟಿಸಿರುವ ನಿರ್ಮಾಪಕ ಕೆ. ಮಂಜು ಮಗ ಶ್ರೇಯಸ್ ಕೆ. (Shreyas K) ಅವರು ಹೊಸ ಸಿನಿಮಾ ಘೋಷಿಸಿದ್ದಾರೆ. ಈ ಚಿತ್ರಕ್ಕೆ ‘ದಿಲ್​ದಾರ್’ ಎನ್ನುವ ಶೀರ್ಷಿಕೆ ಇಡಲಾಗಿದೆ. ಮಾಸ್​ ಎಂಟರ್​ಟೇನ್​ ಹಾಗೂ ಕಾಲೇಜು ಕಥೆಯನ್ನು ಈ ಸಿನಿಮಾ ಹೊಂದಿರಲಿದೆ. ಶ್ರೇಯಸ್​ಗೆ ಜೊತೆಯಾಗಿ ಪ್ರಿಯಾಂಕಾ ಕುಮಾರ್ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. ರವಿಚಂದ್ರನ್ ಅವರು ಬಂದು ತಂಡಕ್ಕೆ ಶುಭಕೋರಿದರು. ಆ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More