ಸಿಎಸ್​​ಕೆಗೆ ಬಂದ ಹೀನಾಯ ಸ್ಥಿತಿ ನೋಡಿ ಭಾವುಕರಾದ ಜಡೇಜಾ

Updated on: Mar 31, 2026 | 8:33 AM

ಚೆನ್ನೈ ಸೂಪರ್ ಕಿಂಗ್ಸ್ ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಈ ಬಾರಿ ಅವರು ಅಂಕಪಟ್ಟಿಯಲ್ಲಿ ಮೇಲಿರಬೇಕು ಎಂದು ಪ್ರಯತ್ನಿಸಿದ್ದರು. ಆದರೆ, ಮೊದಲ ಪಂದ್ಯದಲ್ಲೇ ಹೀನಾಯವಾಗಿ ಸೋಲುವ ಮೂಲಕ ಪಟ್ಟಿಯಲ್ಲಿ ಕೆಳಕ್ಕೆ ಇಳಿದಿದ್ದಾರೆ. ಈ ಬಗ್ಗೆ ರವೀಂದ್ರ ಜಡೇಜಾ ಭಾವುಕರಾದರು. ಆ ವಿಡಿಯೋ ವೈರಲ್ ಆಗಿದೆ. 

ಸಿಎಸ್​​ಕೆ ಕಳೆದ ವರ್ಷ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿತ್ತು. ಈ ಬಾರಿ ಹಾಗಾಗಬಾರದು ಎಂದು ಅವರು ಅಂದುಕೊಂಡಿದ್ದರು. ಆದರೆ, ಹಾಗಾಗಿಲ್ಲ. ಮೊದಲ ಪಂದ್ಯದಲ್ಲೇ ಸಿಎಸ್​​ಕೆ ಹೀನಾಯವಾಗಿ ಸೋತಿದೆ. ಮೊದಲು ಬ್ಯಾಟ್ ಮಾಡಿದ ಸಿಎಸ್​ಕೆ 60 ರನ್​​​ಗಳಿಗೆ 6 ವಿಕೆಟ್ ಕಳೆದುಕೊಂಡಿತ್ತು. ಈ ವೇಳೆ ಕ್ಯಾಮೆರಾ ಜಡೇಜಾ ಕಡೆ ತಿರುಗಿತು. ಆಗ ಅವರು ಭಾವುಕರಾದಂತೆ ಕಂಡುಬಂತು. ಈ ವಿಡಿಯೋ ವೈರಲ್ ಆಗಿದೆ. ಜಡೇಜಾ ಕಳೆದ ಬಾರಿ ಸಿಎಸ್​​​ಕೆ ಅಲ್ಲಿದ್ದರು. ಅವರನ್ನು ನಂತರ ಆರ್​​ಆರ್​​ಗೆ ಕಳುಹಿಸಲಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More