IPL 2025: ತವರಿನಲ್ಲಿ ಮೊದಲ ಗೆಲುವು ಸಾಧಿಸಿದ ಆರ್‌ಸಿಬಿ; ಸಂಭ್ರಮಾಚರಣೆ ಹೇಗಿತ್ತು ಗೊತ್ತಾ? ವಿಡಿಯೋ
RCB Beats Rajasthan Royals: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 11 ರನ್‌ಗಳ ಜಯ ಸಾಧಿಸಿತು. ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರ ಅದ್ಭುತ ಅರ್ಧಶತಕ ಮತ್ತು ಜೋಶ್ ಹೇಜಲ್‌ವುಡ್ ಅವರ 4 ವಿಕೆಟ್‌ಗಳ ಸಾಧನೆ ಆರ್‌ಸಿಬಿ ಗೆಲುವಿಗೆ ಕಾರಣವಾಯಿತು. ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್ ಮತ್ತು ಯಶ್ ದಯಾಳ್ ಕೂಡ ಉತ್ತಮ ಬೌಲಿಂಗ್ ಮಾಡಿದರು.
ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕ್ಕಲ್ ಅವರ ಅದ್ಭುತ ಅರ್ಧಶತಕ ಮತ್ತು ಜೋಶ್ ಹೇಜಲ್‌ವುಡ್ ಅವರ ಮಾರಕ ಬೌಲಿಂಗ್‌ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ರಾಜಸ್ಥಾನ ರಾಯಲ್ಸ್ ತಂಡವನ್ನು 11 ರನ್‌ಗಳಿಂದ ಸೋಲಿಸಿತು. ಗುರುವಾರ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ, ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 20 ಓವರ್‌ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 205 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ರಾಜಸ್ಥಾನ್ ನಿಗದಿತ ಓವರ್‌ಗಳಲ್ಲಿ ಒಂಬತ್ತು ವಿಕೆಟ್‌ಗಳ ನಷ್ಟಕ್ಕೆ 194 ರನ್ ಗಳಿಸಲಷ್ಟೇ ಶಕ್ತವಾಯಿತು. ಆರ್‌ಸಿಬಿ ಪರ ಹ್ಯಾಜಲ್‌ವುಡ್ ನಾಲ್ಕು ವಿಕೆಟ್ ಪಡೆದರೆ, ಕೃನಾಲ್ ಪಾಂಡ್ಯ ಎರಡು ವಿಕೆಟ್ ಪಡೆದರು. ಇದಲ್ಲದೆ, ಭುವನೇಶ್ವರ್ ಕುಮಾರ್ ಮತ್ತು ಯಶ್ ದಯಾಳ್ ತಲಾ ಒಂದು ವಿಕೆಟ್ ಪಡೆದರು.
Latest Videos