Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಇಂಡಿಯನ್ಸ್ ತಂಡದ ನಾಯಕಿಯ ಕಿವಿ ಮುಚ್ಚಿಸಿದ RCB ಫ್ಯಾನ್ಸ್​..!

ಮುಂಬೈ ಇಂಡಿಯನ್ಸ್ ತಂಡದ ನಾಯಕಿಯ ಕಿವಿ ಮುಚ್ಚಿಸಿದ RCB ಫ್ಯಾನ್ಸ್​..!

ಝಾಹಿರ್ ಯೂಸುಫ್
|

Updated on:Feb 22, 2025 | 8:31 AM

RCB-W vs MI-W: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಎಲ್ಲಿಸ್ ಪೆರ್ರಿ 43 ಎಸೆತಗಳಲ್ಲಿ 81 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿತು. 168 ರನ್​​ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 19.5 ಓವರ್​ಗಳಲ್ಲಿ 170 ರನ್ ಬಾರಿಸಿ 4 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

ವುಮೆನ್ಸ್ ಪ್ರೀಮಿಯರ್ ಲೀಗ್ ಪಂದ್ಯ. ಕಣಕ್ಕಿಳಿದಿರುವುದು ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಅದು ಸಹ ತವರು ಮೈದಾನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ. ತವರಿನಲ್ಲಿ ಆರ್​ಸಿಬಿ ವನಿತೆಯರ ಆಗಮನಕ್ಕಾಗಿ ಕಾದು ಕುಳಿತಿದ್ದ ಅಭಿಮಾನಿಗಳು ಸ್ಟೇಡಿಯಂನಲ್ಲಿ ಕಿಕ್ಕಿರಿದು ತುಂಬಿದ್ದರು.
ಅಷ್ಟೇ ಅಲ್ಲದೇ ಮೊದಲ ಓವರ್ ನಿಂದಲೇ ಆರ್​ಸಿಬಿ ಪಡೆಯನ್ನು ಹುರಿದುಂಬಿಸಲಾರಂಭಿಸಿದರು. ಇದರ ನಡುವೆ ಎಲ್ಲಿಸ್ ಪೆರ್ರಿ ಅವರ ಆರ್ಭಟ ಶುರುವಾಗಿತ್ತು. ಇತ್ತ ಪೆರ್ರಿ ಆರ್ಭಟಿಸುತ್ತಿದ್ದಂತೆ ಅತ್ತ ಆರ್​ಸಿಬಿ ಅಭಿಮಾನಿಗಳ ಹರ್ಷೋದ್ಗಾರ ಮುಗಿಲು ಮುಟ್ಟಿತ್ತು.

ಇದರಿಂದ ಕಂಗೆಟ್ಟಿದ್ದು ಮುಂಬೈ ಇಂಡಿಯನ್ಸ್ ಫೀಲ್ಡರ್​ಗಳು. ಅದರಲ್ಲೂ ಮುಂಬೈ ಇಂಡಿಯನ್ಸ್ ತಂಡದ ನಾಯಕಿ ಹರ್ಮನ್​ಪ್ರೀತ್ ಕೌರ್ ಕೆಲ ಕಿವಿ ಮುಚ್ಚುವ ಮೂಲಕ ಮೈದಾನದಲ್ಲಿ ಕಾಣಿಸಿಕೊಂಡರು. ಇದೀಗ ಆರ್​ಸಿಬಿ ಅಭಿಮಾನಿಗಳ ಸೌಂಡ್ ಎಫೆಕ್ಟ್​ನ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆರ್​ಸಿಬಿ ಪರ ಎಲ್ಲಿಸ್ ಪೆರ್ರಿ 43 ಎಸೆತಗಳಲ್ಲಿ 81 ರನ್ ಬಾರಿಸಿದರು. ಈ ಅರ್ಧಶತಕದ ನೆರವಿನಿಂದ ಆರ್​ಸಿಬಿ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿತು. 168 ರನ್​​ಗಳ ಗುರಿ ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡವು 19.5 ಓವರ್​ಗಳಲ್ಲಿ 170 ರನ್ ಬಾರಿಸಿ 4 ವಿಕೆಟ್​ಗಳ ರೋಚಕ ಜಯ ಸಾಧಿಸಿದೆ.

 

Published on: Feb 22, 2025 08:30 AM