ವಿಧಾನಸೌಧದ ಗೇಟ್ ಹತ್ತಿ ಆರ್ಸಿಬಿ ಅಭಿಮಾನಿಗಳ ಹುಚ್ಚಾಟ; ಪರಿಸ್ಥಿತಿ ನಿಭಾಯಿಸಲು ಪೊಲೀಸರ ಪರದಾಟ
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಎಲ್ಲ ಸಚಿವರು ಆರ್ಸಿಬಿ ತಂಡದ ಆಟಗಾರರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ವಿಧಾನಸೌಧದ ಹೊರಗೆ ಭಾರೀ ಸಂಖ್ಯೆಯಲ್ಲಿ ಆರ್ಸಿಬಿ ಅಭಿಮಾನಿಗಳು ಸೇರಿದ್ದಾರೆ. ಸಾವಿರಾರು ಅಭಿಮಾನಿಗಳು ವಿಧಾನಸೌಧದ ಮುಂಭಾಗದ ಗೇಟ್ ಸುತ್ತ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ.
ಬೆಂಗಳೂರು, ಜೂನ್ 4: ಮೊದಲ ಬಾರಿಗೆ ಐಪಿಎಲ್ (IPL) ಕಪ್ ಗೆದ್ದಿರುವ ಆರ್ಸಿಬಿ ತಂಡಕ್ಕೆ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದಿಂದ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ಎಲ್ಲ ಸಚಿವರು ಆರ್ಸಿಬಿ ತಂಡದ (RCB Team) ಆಟಗಾರರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಈಗಾಗಲೇ ವಿಧಾನಸೌಧದ ಹೊರಗೆ ಭಾರೀ ಸಂಖ್ಯೆಯಲ್ಲಿ ಆರ್ಸಿಬಿ ಅಭಿಮಾನಿಗಳು ಸೇರಿದ್ದಾರೆ. ಸಾವಿರಾರು ಅಭಿಮಾನಿಗಳು ವಿಧಾನಸೌಧದ ಮುಂಭಾಗದ ಗೇಟ್ ಸುತ್ತ ಗಂಟೆಗಟ್ಟಲೆ ಕಾದು ಕುಳಿತಿದ್ದಾರೆ. ಇದರ ನಡುವೆ ಕೆಲವು ಅಭಿಮಾನಿಗಳು ವಿಧಾನಸೌಧದ ಗೇಟ್ ಹತ್ತಿ ಆರ್ಸಿಬಿ ಆರ್ಸಿಬಿ ಎಂದು ಕೂಗುತ್ತಾ ಸ್ಟಂಟ್ ಮಾಡುತ್ತಿದ್ದಾರೆ. ಅವರನ್ನು ಕೆಳಗಿಳಿಸಲು ಪೊಲೀಸರು ಪರದಾಡುತ್ತಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ