IPL 2025: 6,6,6,6,6..! ಗುಜರಾತ್ ವಿರುದ್ಧ ಅಬ್ಬರದ ಅರ್ಧಶತಕ ಸಿಡಿಸಿದ ಲಿವಿಂಗ್‌ಸ್ಟೋನ್; ವಿಡಿಯೋ
Liam Livingstone Fifty: IPL 2025: ಐಪಿಎಲ್ 2025ರ 14ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾದವು. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ, ಲಿಯಾಮ್ ಲಿವಿಂಗ್‌ಸ್ಟೋನ್ ಅವರ ಅರ್ಧಶತಕದ ನೆರವಿನಿಂದ 169 ರನ್ ಗಳಿಸಿತು. ಜಿತೇಶ್ ಶರ್ಮಾ ಕೂಡ ಉತ್ತಮ ಆಟವಾಡಿದರು. ಆರ್‌ಸಿಬಿ ಆರಂಭಿಕ ವಿಕೆಟ್‌ಗಳನ್ನು ಕಳೆದುಕೊಂಡರೂ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಉತ್ತಮ ಪ್ರದರ್ಶನ ನೀಡಿದರು.
ಐಪಿಎಲ್ 2025 ರ 14 ನೇ ಪಂದ್ಯ ಇಂದು ಆರ್‌ಸಿಬಿಯ ತವರು ಮೈದಾನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಜತ್ ಪಟಿದಾರ್ ತಂಡ ಪೂರ್ಣ ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿ ಗುಜರಾತ್ ಗೆಲುವಿಗೆ 170 ರನ್‌ಗಳ ಟಾರ್ಗೆಟ್ ನೀಡಿದೆ.
ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ 42 ರನ್‌ಗಳಿಸುವ ಹೊತ್ತಿಗೆ ನಾಲ್ವರು ಪ್ರಮುಖ ಬ್ಯಾಟ್ಸ್‌ಮನ್‌ಗಳು ಪೆವಿಲಿಯನ್‌ಗೆ ಮರಳಿದ್ದರು. ಆದಾಗ್ಯೂ, ಇದಾದ ನಂತರ, ಲಿಯಾಮ್ ಲಿವಿಂಗ್‌ಸ್ಟೋನ್ ಮತ್ತು ಜಿತೇಶ್ ಶರ್ಮಾ ಜವಾಬ್ದಾರಿ ವಹಿಸಿಕೊಂಡು ಗುಜರಾತ್ ಬೌಲರ್‌ಗಳನ್ನು ಸದೆಬಡಿದರು. ಇವರಿಬ್ಬರ ನಡುವೆ ಐದನೇ ವಿಕೆಟ್‌ಗೆ 52 ರನ್‌ಗಳ ಜೊತೆಯಾಟ ಇತ್ತು. ಜಿತೇಶ್ 21 ಎಸೆತಗಳಲ್ಲಿ 5 ಬೌಂಡರಿ ಮತ್ತು 1 ಸಿಕ್ಸರ್ ಒಳಗೊಂಡ 33 ರನ್ ಗಳಿಸಿ ಔಟಾದರು.ಇತ್ತ ಲಿವಿಂಗ್‌ಸ್ಟೋನ್ ಅರ್ಧಶತಕದ ಇನ್ನಿಂಗ್ಸ್ ಆಡಿದರು. ತಮ್ಮ 54 ರನ್‌ಗಳ ಇನ್ನಿಂಗ್ಸ್‌ನಲ್ಲಿ ಲಿವಿಂಗ್‌ಸ್ಟೋನ್ 1 ಬೌಂಡರಿ ಮತ್ತು 5 ಅಮೋಘ ಸಿಕ್ಸರ್‌ಗಳನ್ನು ಬಾರಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗ್ರಾಮೀಣ ಭಾಗಗಳಲ್ಲಿ ಹೆಚ್ಚುತ್ತಿದೆ ಅಕ್ರಮ ಮದ್ಯ ಮಾರಾಟ, ಇಲಾಖೆ ನಿರ್ಲಿಪ್ತ

ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ

ಸವದತ್ತಿ ಯಲ್ಲಮ್ಮಗೆ ಜಲ ದಿಗ್ಭಂಧನ: ದೇಗುಲದಲ್ಲಿ ಪ್ರವಾಹದಂತೆ ಹರಿದ ನೀರು

ಬಡವರಿಗೆ ನಿವೇಶನಗಳನ್ನು ಮಾಡಿ ಹಂಚಲು ಬೈಲಹೊಂಗಲದಲ್ಲಿ ಖರೀದಿಯಾಗಿದ್ದ ಜಮೀನು
