RCB IPL Victory Stampede: ಆರ್ಸಿಬಿ ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ವಿಜಯೋತ್ಸವದ ಸಮಯದಲ್ಲಿ ಬೆಂಗಳೂರಿನಲ್ಲಿ ಭೀಕರ ಕಾಲ್ತುಳಿತ ಸಂಭವಿಸಿ 10 ಜನರು ಮೃತಪಟ್ಟಿದ್ದಾರೆ. ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸೇರಿದ್ದ ಸಾವಿರಾರು ಅಭಿಮಾನಿಗಳ ನಡುವೆ ನೂಕುನುಗ್ಗಲು ಉಂಟಾಗಿ ಈ ದುರಂತ ಸಂಭವಿಸಿದೆ. ಅನೇಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರು, ಜೂನ್ 04: 18ನೇ ಆವೃತ್ತಿಯ ಐಪಿಎಲ್ (IPL) ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣ (Chinnaswamy Stadium) ವಿಜಯ ಸಂಭ್ರಮಚರಣೆ ಮತ್ತು ವಿಧಾನಸೌಧದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಗಳನ್ನು ವೀಕ್ಷಿಸಲು ಸಾವಿರಾರು ಮಂದಿ ಆರ್ಸಿಬಿ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಮತ್ತು ವಿಧಾನಸೌಧ ಎದುರು ಜಮಾಯಿಸಿದ್ದರು.ಈ ವೇಳೆ ಘೋರ ದುರಂತ ಸಂಭವಿಸಿದೆ. ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 10 ಮಂದಿ ಮೃತಟ್ಟಿದ್ದಾರೆ. ಕಾಲ್ತುಳಿತದ ಬಗ್ಗೆ ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
Latest Videos