IPL 2025: ಮೊದಲ ಪಂದ್ಯಕ್ಕಾಗಿ ಕೊಲ್ಕತ್ತಾಗೆ ಹಾರಿದ ಆರ್ಸಿಬಿ; ವಿಡಿಯೋ ರಿಲೀಸ್
RCB vs KKR: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯಾದರೂ ಐಪಿಎಲ್ ಟ್ರೋಫಿಯನ್ನು ಗೆಲ್ಲುವ ಉದ್ದೇಶದೊಂದಿಗೆ ಐಪಿಎಲ್ಗೆ ಸಿದ್ಧವಾಗಿದೆ.ಟೂರ್ನಿಯ ಮೊದಲ ಪಂದ್ಯವನ್ನು ಆಡುತ್ತಿರುವ ಆರ್ಸಿಬಿ, ಇದೀಗ ಈ ಪಂದ್ಯಕ್ಕಾಗಿ ಕೊಲ್ಕತ್ತಾಗೆ ಪ್ರಯಾಣ ಬೆಳೆಸಿದೆ. ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಈ ಪಂದ್ಯ ಮಾರ್ಚ್ 22 ರಂದು ನಡೆಯಲಿದೆ.
ಒಮ್ಮೆಯೂ ಐಪಿಎಲ್ ಕಪ್ ಗೆಲ್ಲದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿಯಾದರೂ ಟ್ರೊಫಿ ಬರವನ್ನು ನೀಗಿಸುವ ಸಲುವಾಗಿ ಟೂರ್ನಿಯನ್ನು ಗೆಲುವಿನೊಂದಿಗೆ ಆರಂಬಿಸಲು ಎದುರು ನೋಡುತ್ತಿದೆ. ಇದಕ್ಕೆ ಪೂರಕವಾಗಿ ಆರ್ಸಿಬಿ ತನ್ನ ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಅವರ ನೆಲದಲ್ಲಿ ಎದುರಿಸಲಿದೆ. ಈ ಪಂದ್ಯದಲ್ಲಿ ಆರ್ಸಿಬಿ ಗೆದ್ದರೆ ಅದರ ಮನೋಬಲ ದುಪ್ಪಟ್ಟಾಗಲಿದೆ. ಏಕೆಂದರೆ ಹಾಲಿ ಚಾಂಪಿಯನ್ ಕೆಕೆಆರ್ ಕಳೆದ ಆವೃತ್ತಿಯಲ್ಲಿ ಆಡಿದ ಎರಡು ಪಂದ್ಯಗಳಲ್ಲೂ ಆರ್ಸಿಬಿಯನ್ನು ಮಣಿಸಿತ್ತು. ಹೀಗಾಗಿ ಈ ಆವೃತ್ತಿಯ ಮೊದಲ ಪಂದ್ಯದಲ್ಲಿ ಕೆಕೆಆರ್ ತಂಡವನ್ನು ಮಣಿಸಿ ಹಳೆಯ ಸೋಲಿಗೆ ಸೇಡು ತೀರಿಸಿಕೊಳ್ಳುವ ಇರಾದೆಯಲ್ಲಿ ರಜತ್ ಪಡೆ ಇದೆ. ಮಾರ್ಚ್ 22 ರಂದು ಉಭಯ ತಂಡಗಳ ನಡುವೆ ಮೊದಲ ಪಂದ್ಯ ನಡೆಯಲಿದೆ. ಇದೀಗ ಈ ಪಂದ್ಯಕ್ಕಾಗಿ ಆರ್ಸಿಬಿ ತಂಡ ಬೆಂಗಳೂರಿನಿಂದ ಕೊಲ್ಕತ್ತಾಗೆ ಪ್ರಯಾಣ ಬೆಳೆಸಿದೆ. ಅದರ ವಿಡಿಯೋವನ್ನು ಫ್ರಾಂಚೈಸಿ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಜ್ಞಾವಿಧಿ

ಟಿವಿ9 ಎಕ್ಸ್ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?

ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್

ಸರ್ಕಾರದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
