IPL 2025: ಐಪಿಎಲ್ ಫೈನಲ್​ಗೇರಿದ ಆರ್​ಸಿಬಿಯ ಸಂಭ್ರಮಾಚರಣೆ ಹೇಗಿತ್ತು? ವಿಡಿಯೋ ನೋಡಿ

Updated on: May 29, 2025 | 10:49 PM

RCB Storms into IPL 2025 Final: ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಕಿಂಗ್ಸ್ ವಿರುದ್ಧದ ಕ್ವಾಲಿಫೈಯರ್‌ 1 ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದು 2025ರ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದೆ. ಪಂಜಾಬ್ ಕಿಂಗ್ಸ್ 101 ರನ್‌ಗಳಿಗೆ ಆಲೌಟ್ ಆದ ನಂತರ, ಫಿಲ್ ಸಾಲ್ಟ್ ಅವರ ಅರ್ಧಶತಕದ ನೆರವಿನಿಂದ ಆರ್‌ಸಿಬಿ ಸುಲಭವಾಗಿ ಗೆಲುವು ಸಾಧಿಸಿತು. ನಾಯಕ ರಜತ್ ಪಾಟಿದರ್ ಗೆಲುವಿನ ಸಿಕ್ಸರ್ ಬಾರಿಸುತ್ತಿದ್ದಂತೆ ಇಡೀ ಕ್ರೀಡಾಂಗಣವೇ ಹುಚ್ಚೆದ್ದು ಕುಣಿಯಿತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಪಂಜಾಬ್ ಕಿಂಗ್ಸ್ ತಂಡವನ್ನು ಎಂಟು ವಿಕೆಟ್‌ಗಳಿಂದ ಸೋಲಿಸಿ 2025 ರ ಐಪಿಎಲ್ ಫೈನಲ್‌ಗೆ ಪ್ರವೇಶಿಸಿದೆ. ಇದರೊಂದಿಗೆ ಆರ್​ಸಿಬಿ 2009, 2011 ಮತ್ತು 2016 ರ ನಂತರ ಫೈನಲ್ ತಲುಪಿದೆ. ಕ್ವಾಲಿಫೈಯರ್ -1 ಪಂದ್ಯದಲ್ಲಿ ಆರ್‌ಸಿಬಿ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಮೊದಲು ಬ್ಯಾಟ್ ಮಾಡಿದ ಪಂಜಾಬ್ ಕಿಂಗ್ಸ್ 14.1 ಓವರ್‌ಗಳಲ್ಲಿ 101 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಫಿಲ್ ಸಾಲ್ಟ್ ಅವರ ಅರ್ಧಶತಕದ ಆಧಾರದ ಮೇಲೆ ಆರ್‌ಸಿಬಿ 10 ಓವರ್‌ಗಳಲ್ಲಿ ಎರಡು ವಿಕೆಟ್‌ಗಳ ನಷ್ಟಕ್ಕೆ 106 ರನ್ ಗಳಿಸಿ ಪಂದ್ಯವನ್ನು ಗೆದ್ದುಕೊಂಡಿತು. 10ನೇ ಓವರ್​ನ ಕೊನೆಯ ಎಸೆತದಲ್ಲಿ ನಾಯಕ ರಜತ್ ಪಾಟಿದರ್ ಗೆಲುವಿನ ಸಿಕ್ಸರ್ ಬಾರಿಸುತ್ತಿದ್ದಂತೆ ಇಡೀ ಕ್ರೀಡಾಂಗಣವೇ ಹುಚ್ಚೆದ್ದು ಕುಣಿಯಿತು.

Published on: May 29, 2025 10:48 PM