ಪರಮಾತ್ಮ ಪುನೀತ್ ರಾಜ್ಕುಮಾರ್ಗೆ ವಿಶೇಷ ಗೌರವ ಸಲ್ಲಿಸಿದ ಆರ್ಸಿಬಿ; ಭಾವುಕರಾದ ಫ್ಯಾನ್ಸ್
RCB Unbox Event: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅನ್‌ಬಾಕ್ಸ್ ಈವೆಂಟ್ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅದ್ದೂರಿಯಾಗಿ ನಡೆಯಿತು. ಪುನೀತ್ ರಾಜ್‌ಕುಮಾರ್ ಅವರ 50ನೇ ಜನ್ಮದಿನದಂದು ಅವರನ್ನು ಸ್ಮರಿಸಲಾಯಿತು. ಶಿವರಾಜ್‌ಕುಮಾರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ವಿಜಯಪ್ರಕಾಶ್ ಅವರು ರಾಜ್‌ಕುಮಾರ್ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ಹಾಡನ್ನು ಹಾಡುವ ಮೂಲಕ ಅಭಿಮಾನಿಗಳನ್ನು ಭಾವುಕರಾಗಿಸಿದರು.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅನ್‌ಬಾಕ್ಸ್ ಈವೆಂಟ್ ಅದ್ಧೂರಿಯಾಗಿ ನೆರವೇರಿತು. ಈ ಸಮಾರಂಭದಲ್ಲಿ ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರನ್ನು ಸ್ಮರಿಸಲಾಯಿತು. ವಾಸ್ತವವಾಗಿ ಈ ಕಾರ್ಯಕ್ರಮ ನಡೆಯುತ್ತಿರುವ ದಿನದಂದೇ ಅಪ್ಪು ಅವರ 50ನೇ ಜನ್ಮದಿನವಾಗಿದ್ದು, ಅಗಲಿದ ಮಹಾನ್ ಚೇತನಕ್ಕೆ ಆರ್ಸಿಬಿ ವಿಶೇಷ ಗೌರವವನ್ನು ಸಲ್ಲಿಸಿತು. ಇನ್ನು ಕಾರ್ಯಕ್ರಮದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಸಹ ಹಾಜರಿದ್ದರು. ಇದೇ ವೇಳೆ ಗಾಯಕ ವಿಜಯಪ್ರಕಾಶ್ ಅವರು ರಾಜ್ಕುಮಾರ ಚಿತ್ರದ ಬೊಂಬೆ ಹೇಳುತೈತೆ ಮತ್ತೆ ಹೇಳುತೈತೆ ಗೀತೆಯನ್ನು ಹಾಡುವ ಮೂಲಕ ಅಭಿಮಾನಿಗಳನ್ನು ರಂಜಿಸಿದರು.
Published on: Mar 17, 2025 10:19 PM
Latest Videos