RCB Unbox:‘ಸಾಧ್ಯವಾದಷ್ಟು ಪ್ರೀತಿ ನೀಡಿ’; ಅನ್‌ಬಾಕ್ಸ್ ಈವೆಂಟ್‌ನಲ್ಲಿ ಕಿಂಗ್ ಕೊಹ್ಲಿ ಮಾತು
RCB Unbox: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ ಅನ್‌ಬಾಕ್ಸ್ ಕಾರ್ಯಕ್ರಮದಲ್ಲಿ ರಾಜತ್ ಪಟಿದಾರ್ ಅವರನ್ನು ಹೊಸ ನಾಯಕರನ್ನಾಗಿ ಘೋಷಿಸಿತು. ವಿರಾಟ್ ಕೊಹ್ಲಿ ಅವರು ಪಟಿದಾರ್ ಅವರಿಗೆ ವಿಶೇಷ ಉಡುಗೊರೆಯನ್ನು ನೀಡಿ, ರಜತ್ ದೀರ್ಘಕಾಲದವರೆಗೆ ತಂಡವನ್ನು ಮುನ್ನಡೆಸಲಿದ್ದಾರೆ. ಹೀಗಾಗಿ ಅವರಿಗೆ ನೀವು ಸಾಧ್ಯವಾದಷ್ಟು ಪ್ರೀತಿ ನೀಡಿ ಎಂದು ಅಭಿಮಾನಿಗಳ ಬಳಿ ಕೇಳಿಕೊಂಡರು.
ಪ್ರತಿ ಬಾರಿಯಂತೆ ಈ ಬಾರಿಯೂ ಐಪಿಎಲ್ ಆರಂಭಕ್ಕೂ ಮೊದಲು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಆರ್‌ಸಿಬಿ ಅನ್‌ಬಾಕ್ಸ್ ಕಾರ್ಯಕ್ರಮವನ್ನು ತವರು ನೆಲವಾದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿತ್ತು. ಈ ಕಾರ್ಯಕ್ರಮದ ಕೇಂದ್ರ ಬಿಂದುವಾಗಿದ್ದ ಆರ್‌ಸಿಬಿ ದತ್ತು ಪುತ್ರ ವಿರಾಟ್ ಕೊಹ್ಲಿ ತಂಡದ ನಾಯಕರಾಗಿರುವ ರಜತ್ ಪಟಿದಾರ್ ಅವರಿಗೆ ವಿಶೇಷ ಉಡುಗೊರೆಯನ್ನು ನೀಡಿದರು. ಇದೇ ವೇಳೆ ನೂತನ ನಾಯಕನ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ, ರಜತ್ ಪಾಟಿದಾರ್ ಈ ತಂಡವನ್ನು ದೀರ್ಘಕಾಲದವರೆಗೆ ಮುನ್ನಡೆಸಲಿದ್ದಾರೆ. ಅವರಿಗೆ ನೀವು ಸಾಧ್ಯವಾದಷ್ಟು ಪ್ರೀತಿ ನೀಡಿ. ರಜತ್ ಈ ಅದ್ಭುತ ಫ್ರಾಂಚೈಸಿಗಾಗಿ ಉತ್ತಮ ಕೆಲಸ ಮಾಡುತ್ತಾರೆ ಮತ್ತು ಈ ತಂಡವನ್ನು ಮುಂದೆ ಕೊಂಡೊಯ್ಯುತ್ತಾರೆ ಎಂದು ಹೇಳಿದರು.
Latest Videos

ಎಚ್ಡಿಕೆ ತೋಟದ ಮನೆ ಸುತ್ತ ಎಷ್ಟು ಎಕರೆ ಒತ್ತುವರಿ?ಸ್ಫೋಟಕ ಮಾಹಿತಿ ಇಲ್ಲಿದೆ

ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕಾರ್ಯಾಚರಣೆ ನಡೆದ ಪ್ರಕರಣಗಳು ವಿರಳ

ಮುಸ್ಲಿಮರಿಗೆ ಶೇ 4 ಮೀಸಲಾತಿ ಸುಪ್ರೀಂನಲ್ಲಿ ಪ್ರಶ್ನಿಸಲಾಗ್ತಿದೆ: ಬೊಮ್ಮಾಯಿ

ತುಮಕೂರು: ಓರ್ವ ವಿದ್ಯಾರ್ಥಿನಿಗಾಗಿ ಒಂದು ಸರ್ಕಾರಿ ಶಾಲೆ, ಓರ್ವ ಶಿಕ್ಷಕಿ
