AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಅಭಿಮಾನಿಗಳ ನೂಕುನುಗ್ಗಲು; ಗೇಟ್ ಹತ್ತಿ ಕಾಲು ಮುರಿದುಕೊಂಡ ಯುವಕ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಅಭಿಮಾನಿಗಳ ನೂಕುನುಗ್ಗಲು; ಗೇಟ್ ಹತ್ತಿ ಕಾಲು ಮುರಿದುಕೊಂಡ ಯುವಕ

ಸುಷ್ಮಾ ಚಕ್ರೆ
|

Updated on:Jun 04, 2025 | 4:41 PM

Share

ಚಿನ್ನಸ್ವಾಮಿ ಸ್ಟೇಡಿಯಂ ಫುಲ್ ಆಗಿದ್ದು, ಒಳಗೆ ಪ್ರವೇಶ ನೀಡುತ್ತಿಲ್ಲ. ಹೀಗಾಗಿ, ಜನರು ಒಳಗೆ ನುಗ್ಗಲು ತಳ್ಳಾಟ ನಡೆಸುತ್ತಿದ್ದಾರೆ. ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಎಲ್ಲಿ ನೋಡಿದರೂ ಆರ್​ಸಿಬಿ ಆರ್​ಸಿಬಿ ಎಂಬ ಘೋಷಣೆಗಳೇ ಕೇಳುತ್ತಿದ್ದು, ಆರ್​ಸಿಬಿ ಕ್ರೇಜ್ ಇನ್ನಷ್ಟು ಹೆಚ್ಚಾಗಿದೆ.

ಬೆಂಗಳೂರು, ಜೂನ್ 4: ಕರ್ನಾಟಕದ ಅಭಿಮಾನಿಗಳ ಬರೋಬ್ಬರಿ 18 ವರ್ಷಗಳ ಕನಸನ್ನು ನನಸು ಮಾಡಿರುವ ಆರ್​​ಸಿಬಿ ತಂಡ (RCB Team) ಈ ಬಾರಿಯ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಗಳೂರಿನಲ್ಲಿ ಇಂದು ಆರ್​ಸಿಬಿ ವಿಜಯೋತ್ಸವ ನಡೆಯಲಿದ್ದು, ಈಗಾಗಲೇ ಆರ್​ಸಿಬಿ ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ. ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Stadium) ಫುಲ್ ಆಗಿದ್ದು, ಒಳಗೆ ಪ್ರವೇಶ ನೀಡುತ್ತಿಲ್ಲ. ಹೀಗಾಗಿ, ಜನರು ಒಳಗೆ ನುಗ್ಗಲು ತಳ್ಳಾಟ ನಡೆಸುತ್ತಿದ್ದಾರೆ. ಸ್ಟೇಡಿಯಂ ಹೊರಗೂ ಜನಸಾಗರವೇ ಸೇರಿದ್ದು ಇದರಿಂದ ಆ ಮಾರ್ಗದಲ್ಲಿ ಸಂಚರಿಸುವ ವಾಹನಗಳು ಮುಂದೆ ಹೋಗಲಾಗದೆ ಟ್ರಾಫಿಕ್ ಜಾಮ್ ಉಂಟಾಗಿದೆ. ಎಲ್ಲಿ ನೋಡಿದರೂ ಆರ್​ಸಿಬಿ ಆರ್​ಸಿಬಿ ಎಂಬ ಘೋಷಣೆಗಳೇ ಕೇಳುತ್ತಿದ್ದು, ಆರ್​ಸಿಬಿ ಕ್ರೇಜ್ ಇನ್ನಷ್ಟು ಹೆಚ್ಚಾಗಿದೆ.

ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ನೂಕು ನುಗ್ಗಲು ಉಂಟಾಗಿದ್ದು, ಯುವಕನೋರ್ವನಿಗೆ ಕಾಲು ಮುರಿತವಾಗಿದೆ. ಗೇಟ್​ ನಂಬರ್ 6ರ ಬಳಿ ಗೇಟ್ ಹತ್ತಲು ಹೋದ ಯುವಕ ಬಿದ್ದು ಕಾಲು ಮುರಿದುಕೊಂಡಿದ್ದಾನೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ನೂಕುನುಗ್ಗಲಿನಲ್ಲಿ ಹಲವರಿಗೆ ಗಂಭೀರ ಗಾಯಗಳಾಗಿವೆ. ಗಾಯಗೊಂಡವರನ್ನು ಪೊಲೀಸರು ತಮ್ಮ ಜೀಪ್​ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ಗೇಟ್ ನಂಬರ್ 12ರಲ್ಲಿ ಮಹಿಳಾ ಅಭಿಮಾನಿಯೊಬ್ಬರು ಕುಸಿದುಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

 

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

 

 

Published on: Jun 04, 2025 04:22 PM