ಆರ್ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ ಸ್ಟೇಷನ್!
ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ವಾಹನಗಳ ಪ್ರವೇಶ ನಿಷೇಧಿಸಿರುವುದರಿಂದ ಬಹುತೇಕ ಅಭಿಮಾನಿಗಳು ಮೆಟ್ರೋ ನಿಲ್ದಾಣಕ್ಕೆ ನುಗ್ಗಿದ್ದಾರೆ. ಇದರಿಂದಾಗಿ ಇಂದು ಮಧ್ಯಾಹ್ನದಿಂದ ಎಂಜಿ ರಸ್ತೆ, ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ಗಳು ಜಾತ್ರೆಯಂತಾಗಿವೆ. ಈ ಮಾರ್ಗದ ಮೆಟ್ರೋ ರೈಲುಗಳಲ್ಲಿ ಕಾಲು ಹಾಕಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ವಿಜಯ ಯಾತ್ರೆಗೂ ಮುನ್ನವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತದಲ್ಲಿ 6 ಅಭಿಮಾನಿಗಳು ಸಾವನ್ನಪ್ಪಿದ್ದಾರೆ.
ಬೆಂಗಳೂರು, ಜೂನ್ 4: ಬೆಂಗಳೂರಿಗೆ ವಿಜಯೋತ್ಸವ ಆಚರಿಸಲು ಆಗಮಿಸಿರುವ ಈ ಬಾರಿಯ ಐಪಿಎಲ್ ಚಾಂಪಿಯನ್ಸ್ (IPL Champions) ಆರ್ಸಿಬಿ ತಂಡಕ್ಕೆ ಅಭಿಮಾನಿಗಳು ಎಷ್ಟಿದ್ದಾರೆ ಎಂಬುದನ್ನು ಪ್ರತ್ಯೇಕವಾಗೇನೂ ಹೇಳಬೇಕಾಗಿಲ್ಲ. ತಮ್ಮ ನೆಚ್ಚಿನ ತಂಡವನ್ನು ನೋಡಲು ವಿಧಾನಸೌಧ, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಸಾವಿರಾರು ಅಭಿಮಾನಿಗಳು ಆಗಮಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ವಾಹನಗಳ ಪ್ರವೇಶ ನಿಷೇಧಿಸಿರುವುದರಿಂದ ಬಹುತೇಕ ಅಭಿಮಾನಿಗಳು ಮೆಟ್ರೋ ನಿಲ್ದಾಣಕ್ಕೆ (Bengalruu Metro) ನುಗ್ಗಿದ್ದಾರೆ. ಇದರಿಂದಾಗಿ ಇಂದು ಮಧ್ಯಾಹ್ನದಿಂದ ಎಂಜಿ ರಸ್ತೆ, ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ಗಳು ಜಾತ್ರೆಯಂತಾಗಿವೆ. ಈ ಮಾರ್ಗದ ಮೆಟ್ರೋ ರೈಲುಗಳಲ್ಲಿ ಕಾಲು ಹಾಕಲೂ ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ವಿಜಯ ಯಾತ್ರೆಗೂ ಮುನ್ನವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತದಲ್ಲಿ 6 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ಬ್ಯಾರಿಕೇಡ್ ಬಿದ್ದು ಮೂವರ ಕಾಲು ಕಟ್ ಆಗಿದೆ. ನೂಕುನುಗ್ಗಲು ಹೆಚ್ಚಾಗುತ್ತಲೇ ಇದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.
ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ