RCB vs GT Final: ಪವರ್​ ಪ್ಲೇನಲ್ಲೇ ಗುಜರಾತ್ ಬ್ಯಾಟಿಂಗ್‌ ಬೆನ್ನೆಲುಬು ಮುರಿದ ಆರ್​ಸಿಬಿ

Updated on: May 31, 2026 | 8:21 PM

RCB vs GT Final: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ vs ಗುಜರಾತ್ ನಡುವಿನ ಫೈನಲ್ ಪಂದ್ಯದಲ್ಲಿ, ಟಾಸ್ ಗೆದ್ದ RCB ಮೊದಲು ಬೌಲಿಂಗ್ ಆಯ್ದುಕೊಂಡಿತು. ಗುಜರಾತ್ ಟೈಟಾನ್ಸ್ ಪವರ್‌ಪ್ಲೇನಲ್ಲೇ ತನ್ನ ಪ್ರಮುಖ ಬ್ಯಾಟ್ಸ್‌ಮನ್‌ಗಳಾದ ಶುಭ್ಮನ್ ಗಿಲ್ ಮತ್ತು ಸಾಯಿ ಸುದರ್ಶನ್ ವಿಕೆಟ್‌ಗಳನ್ನು ಕಳೆದುಕೊಂಡಿತು. ಕೇವಲ 26 ರನ್‌ಗಳಿಗೆ 2 ವಿಕೆಟ್‌ಗಳು ಪತನಗೊಂಡ ಕಾರಣ, ಗುಜರಾತ್ ಪವರ್‌ಪ್ಲೇ ಅಂತ್ಯಕ್ಕೆ 45 ರನ್ ಗಳಿಸಿ, ಸಂಕಷ್ಟದಲ್ಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಗುಜರಾತ್ ಟೈಟಾನ್ಸ್ ನಡುವೆ ಫೈನಲ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್​ಸಿಬಿ ಮೊದಲು ಬೌಲಿಂಗ್ ಆಯ್ದುಕೊಂಡಿತು. ಹೀಗಾಗಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಗುಜರಾತ್ ತಂಡ ಪವರ್​​ಪ್ಲೇನಲ್ಲೇ ಅಂದರೆ ಮೊದಲ 6 ಓವರ್​​ಗಳಲ್ಲೇ ತನ್ನ ಬ್ಯಾಟಿಂಗ್‌ ಆಧಾರಸ್ತಂಭಗಳಾಗಿದ್ದ ನಾಯಕ ಶುಭ್​ಮನ್ ಗಿಲ್ ಹಾಗೂ ಸಾಯಿ ಸುದರ್ಶನ್ ಅವರ ವಿಕೆಟ್ ಕಳೆದುಕೊಂಡಿದೆ. ಈ ಎರಡು ವಿಕೆಟ್​ಗಳು ಕೇವಲ 26 ರನ್​ಗಳಿಗೆ ಪತನವಾದವು. ಇದರ ಪರಿಣಾಮವಾಗಿ ಗುಜರಾತ್ ಪವರ್​ಪ್ಲೇನಲ್ಲಿ 2 ವಿಕೆಟ್ ಕಳೆದುಕೊಂಡು 45 ರನ್ ಕಲೆಹಾಕಿದೆ.

ವಾಸ್ತವವಾಗಿ ಈ ಇಡೀ ಆವೃತ್ತಿಯಲ್ಲಿ ಗುಜರಾತ್ ತಂಡದ ಬ್ಯಾಟಿಂಗ್ ಬೆನ್ನೆಲುಬಾಗಿದ್ದೆ ಸುದರ್ಶನ್ ಹಾಗೂ ಗಿಲ್. ಇವರಿಬ್ಬರು ಭಾಗಶಃ ಪಂದ್ಯಗಳಲ್ಲಿ ತಂಡಕ್ಕೆ ಉತ್ತಮ ಆರಂಭ ಒದಗಿಸಿಕೊಟ್ಟಿದ್ದರು. ಇದರ ಪರಿಣಾಮವಾಗಿ ತಂಡ ಕೂಡ ಭಾಗಶಃ ಪಂದ್ಯಗಳನ್ನು ಗೆದ್ದಿತ್ತು. ಅದರಂತೆ ಫೈನಲ್ ಪಂದ್ಯದಲ್ಲೂ ಇವರಿಬ್ಬರಿಂದ ಒಂದೊಳ್ಳೆ ಜೊತೆಯಾಟವನ್ನು ನಿರೀಕ್ಷಿಸಲಾಗಿತ್ತು. ಆದರೆ ನಾಯಕ ಶುಭ್​ಮನ್ ಗಿಲ್ 8 ಎಸೆತಗಳಲ್ಲಿ 2 ಬೌಂಡರಿ ಸಹಿತ 10 ರನ್​ ಬಾರಿಸಿ ಔಟಾದರೆ, ಸಾಯಿ ಸುದರ್ಶನ್ ಕೂಡ 12 ಎಸೆತಗಳಲ್ಲಿ 2 ಬೌಂಡರಿ ಸಹಿತ 12 ರನ್​ ಕಲೆಹಾಕಲಷ್ಟೇ ಶಕ್ತರಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: May 31, 2026 08:15 PM
Follow Us
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More