RCB vs SRH: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ವೀಕ್ಸಿಸಲು ಬರುವವರಿಗೆ ಹೊಸ ರೂಲ್ಸ್! ಅಭಿಮಾನಿಗಳೇ ಈ ವಿಚಾರ ತಿಳಿದಿರಿ

Updated on: Mar 26, 2026 | 12:53 PM

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಐಪಿಎಲ್ ಪಂದ್ಯಗಳಿಗಾಗಿ ಪ್ರವೇಶ, ಪಾರ್ಕಿಂಗ್ ಮತ್ತು ಭದ್ರತಾ ವ್ಯವಸ್ಥೆಗಳಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಕಬ್ಬನ್ ರೋಡ್ ಮೂಲಕ ಗರಿಷ್ಠ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ವಿಶಾಲವಾದ ಗೇಟ್‌ಗಳನ್ನು ಪರಿಚಯಿಸಲಾಗಿದೆ. ಸಾರ್ವಜನಿಕರು ಮೆಟ್ರೋ ಬಳಸುವಂತೆ ಮತ್ತು ಗೊತ್ತುಪಡಿಸಿದ ಪಾರ್ಕಿಂಗ್ ಸ್ಥಳಗಳಿಂದ ಶಟಲ್ ಬಸ್ ಸೇವೆ ಪಡೆಯುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಬೆಂಗಳೂರು, ಮಾರ್ಚ್ 26: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಮುಂಬರುವ ಐಪಿಎಲ್ ಪಂದ್ಯಗಳಿಗೆ ಭದ್ರತೆ ಮತ್ತು ಪ್ರವೇಶ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ. ಪೊಲೀಸ್ ಅಧಿಕಾರಿಗಳು, ಪಿಡಬ್ಲ್ಯುಡಿ, ವೈದ್ಯಕೀಯ ಸೇವೆಗಳು, ಅಗ್ನಿಶಾಮಕ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಈ ಹೊಸ ವ್ಯವಸ್ಥೆಗಳ ಕುರಿತು ಪೂರ್ವಭಾವಿ ತರಬೇತಿ ನೀಡಲಾಗುತ್ತಿದೆ. ಭದ್ರತಾ ದೃಷ್ಟಿಯಿಂದ, ಹಿಂದಿನಂತೆ ಕ್ವೀನ್ಸ್ ರೋಡ್ ಬದಲು ಕಬ್ಬನ್ ರೋಡ್ ಮತ್ತು ಲಿಂಕ್ ರೋಡ್ ಮೂಲಕ ಗರಿಷ್ಠ ಸಂಖ್ಯೆಯ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಗೇಟ್‌ಗಳನ್ನು ವಿಸ್ತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಸಾರ್ವಜನಿಕರು ಮೆಟ್ರೋ (ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ, ಎಂ.ಜಿ. ರೋಡ್ ನಿಲ್ದಾಣ) ಬಳಸುವಂತೆ ಮನವಿ ಮಾಡಿದ್ದಾರೆ. ಟಿಕೆಟ್‌ಗಳ ಜೊತೆಗೆ ಕ್ಯೂಆರ್ ಕೋಡ್ ಮತ್ತು ಮೆಟ್ರೋ ಟಿಕೆಟ್‌ಗಳನ್ನು ನೀಡಲಾಗುತ್ತಿದೆ. ಅಲ್ಲದೆ, ಪಾರ್ಕಿಂಗ್ ಸ್ಲಾಟ್‌ಗಳನ್ನು ಆನ್‌ಲೈನ್‌ನಲ್ಲಿ ಖರೀದಿಸಿ, ಅಲ್ಲಿಂದ ಶಟಲ್ ಬಸ್‌ಗಳ ಮೂಲಕ ಕ್ರೀಡಾಂಗಣಕ್ಕೆ ತಲುಪುವ ವ್ಯವಸ್ಥೆ ಮಾಡಲಾಗಿದೆ. ಎಲ್ಲ ಪ್ರೇಕ್ಷಕರು ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಪೊಲೀಸರು ವಿನಂತಿ ಮಾಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More