RCB vs SRH: ಐಪಿಎಲ್ ಉದ್ಘಾಟನಾ ಪಂದ್ಯಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPL 2026: 2026ರ ಐಪಿಎಲ್ ಹಬ್ಬಕ್ಕೆ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದೆ. ಮಾರ್ಚ್ 28ರಂದು ಆರ್ಸಿಬಿ-ಎಸ್ಆರ್ಹೆಚ್ ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಹಿಂದಿನ ಕಾಲ್ತುಳಿತ ಘಟನೆಗಳ ನಂತರ ಫ್ರಾಂಚೈಸಿಯು ಎಚ್ಚೆತ್ತುಕೊಂಡಿದ್ದು, ಪ್ರೇಕ್ಷಕರ ಸುರಕ್ಷತೆಗಾಗಿ ಸೀಮಿತ ಪ್ರವೇಶ, ಆನ್ಲೈನ್ ಟಿಕೆಟ್ ಮಾರಾಟ ಮತ್ತು ಎಐ ತಂತ್ರಜ್ಞಾನದಂತಹ ಹೊಸ ಕ್ರಮಗಳನ್ನು ಜಾರಿಗೆ ತರುತ್ತಿದೆ.
ಬೆಂಗಳೂರು, ಮಾರ್ಚ್ 21: 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹಬ್ಬಕ್ಕೆ ಬೆಂಗಳೂರಿನ ಐತಿಹಾಸಿಕ ಚಿನ್ನಸ್ವಾಮಿ ಸ್ಟೇಡಿಯಂ ಸಜ್ಜಾಗಿದೆ. ಮಾರ್ಚ್ 28ರಿಂದ ಪಂದ್ಯಾವಳಿ ಆರಂಭವಾಗಲಿದ್ದು, ಉದ್ಘಾಟನಾ ಪಂದ್ಯವು ಚಿನ್ನಸ್ವಾಮಿಯಲ್ಲೇ ನಡೆಯಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಮತ್ತು ಸನ್ ರೈಸರ್ಸ್ ಹೈದರಾಬಾದ್ (ಎಸ್ಆರ್ಹೆಚ್) ನಡುವೆ ಮೊದಲ ಪಂದ್ಯ ನಡೆಯಲಿದೆ.
ಹಿಂದೆ ಆರ್ಸಿಬಿ ಐಪಿಎಲ್ ಟ್ರೋಫಿ ಗೆದ್ದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಸಂಭವಿಸಿದ್ದ ಕಾಲ್ತುಳಿತದ ಘಟನೆಗಳ ನಂತರ, ಫ್ರಾಂಚೈಸಿಯು ಪ್ರೇಕ್ಷಕರ ಸುರಕ್ಷತೆಗಾಗಿ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಕ್ರೀಡಾಂಗಣವು 35,000 ಜನರ ಸಾಮರ್ಥ್ಯ ಹೊಂದಿದ್ದರೂ, 28,000 ಪ್ರೇಕ್ಷಕರಿಗೆ ಮಾತ್ರ ಪ್ರವೇಶ ನೀಡಲಾಗುತ್ತದೆ. ಟಿಕೆಟ್ ಮಾರಾಟವು ಬಹುತೇಕ ಆನ್ಲೈನ್ ಮೂಲಕ ನಡೆಯಲಿದ್ದು, ಶೀಘ್ರದಲ್ಲೇ ಮಾರಾಟದ ದಿನಾಂಕವನ್ನು ಪ್ರಕಟಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪೆಟ್ರೋಲ್, ಡೀಸೆಲ್ಗಾಗಿ ರಿಪ್ಪನ್ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
