IPL 2026: ಹೈದರಾಬಾದ್ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
IPL 2026, RCB vs SRH Battle for Top 2: ಐಪಿಎಲ್ 2026 ರಲ್ಲಿ RCB vs SRH ನಡುವೆ ಟಾಪ್ 2 ಸ್ಥಾನಕ್ಕಾಗಿ ನಿರ್ಣಾಯಕ ಕದನ ನಡೆಯಲಿದೆ. ಪ್ಲೇಆಫ್ ತಲುಪಿರುವ ಉಭಯ ತಂಡಗಳು ಸನ್‌ರೈಸರ್ಸ್ ತವರು ನೆಲವಾದ ಹೈದರಾಬಾದ್‌ನಲ್ಲಿ ಸೆಣಸಲಿವೆ. ಆರ್ಸಿಬಿ ತಾರೆ ವಿರಾಟ್ ಕೊಹ್ಲಿ ಆಗಮನಕ್ಕೆ ಹೈದರಾಬಾದ್‌ನಲ್ಲಿ ಅಭಿಮಾನಿಗಳು ಅನ್ನ ಸಂತರ್ಪಣೆ ಮೂಲಕ ಭವ್ಯ ಸ್ವಾಗತ ನೀಡಿದ್ದಾರೆ. ಈ ಸಂಭ್ರಮದ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಐಪಿಎಲ್ 2026 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ಕೊನೆಯ ಲೀಗ್ ಪಂದ್ಯವನ್ನು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಆಡಲಿದೆ. ಉಭಯ ತಂಡಗಳು ಈಗಾಗಲೇ ಪ್ಲೇಆಫ್‌ಗೆ ಟಿಕೆಟ್ ಪಡೆದುಕೊಂಡಿವೆ. ಆದರೆ ಟಾಪ್ 2 ಸ್ಥಾನಕ್ಕಾಗಿ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಟಾಪ್ 2 ರಲ್ಲಿ ಸ್ಥಾನ ಪಡೆಯಬೇಕಾದರೆ, ಈ ಪಂದ್ಯದ ಗೆಲುವು ಉಭಯ ತಂಡಗಳಿಗೂ ಅತ್ಯವಶ್ಯಕವಾಗಿದೆ. ಇದರ ಜೊತೆಗೆ ಎರಡೂ ತಂಡಗಳು ತಮ್ಮ ಕೊನೆಯ ಲೀಗ್ ಪಂದ್ಯಗಳಲ್ಲಿ ಗೆಲುವು ಸಾಧಿಸಿರುವುದರಿಂದ ಆತ್ಮವಿಶ್ವಾಸದ ಬೀಗುತ್ತಿವೆ.
ಇದೀಗ ಉಭಯ ತಂಡಗಳ ಕೊನೆಯ ಲೀಗ್ ಪಂದ್ಯ ಸನ್‌ರೈಸರ್ಸ್ ತಂಡದ ತವರು ನೆಲವಾದ ಹೈದರಾಬಾದ್ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಆರ್ಸಿಬಿ ಹೈದರಾಬಾದ್ಗೆ ಪ್ರಯಾಣ ಬೆಳೆಸಲಿದೆ. ತನ್ನ ನೆಚ್ಚಿನ ಆಟಗಾರ ವಿರಾಟ್ ಕೊಹ್ಲಿ ಪಂದ್ಯವನ್ನಾಡಲು ಹೈದರಾಬಾದ್ಗೆ ಬರುತ್ತಿರುವುದು ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ. ಹೀಗಾಗಿ ಕೊಹ್ಲಿ ಅಭಿಮಾನಿಗಳು ಸಾವಿರಾರು ಜನರಿಗೆ ಅನ್ನ ಸಂತರ್ಪಣೆ ಮಾಡುವ ಮೂಲಕ ಕೊಹ್ಲಿಗೆ ಭವ್ಯ ಸ್ವಾಗತ ಕೋರಿದ್ದಾರೆ. ಇದೀಗ ಅದರ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ


