RCB vs UPW, WPL 2024: ಆರ್​ಸಿಬಿ ಗೆದ್ದ ತಕ್ಷಣ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಫ್ಯಾನ್ಸ್ ಏನು ಮಾಡಿದ್ರು ನೋಡಿ

Updated on: Feb 25, 2024 | 8:34 AM

Women's Premier League 2024: ಮಹಿಳಾ ಪ್ರೀಮಿಯರ್ ಲೀಗ್ 2024 ರಲ್ಲಿ ಸ್ಮೃತಿ ಮಂಧಾನ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಭರ್ಜರಿ ಶುಭಾರಂಭ ಮಾಡಿದೆ. ಯುಪಿ ವಾರಿಯರ್ಸ್ ವಿರುದ್ಧ 2 ರನ್​ಗಳ ರೋಚಕ ಜಯ ಸಾಧಿಸಿತು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಗೆದ್ದ ತಕ್ಷಣ ಅಭಿಮಾನಿಗಳು ಏನು ಮಾಡಿದರು ನೀವೇ ನೋಡಿ.

ಮಹಿಳಾ ಪ್ರೀಮಿಯರ್ ಲೀಗ್ ಎರಡನೇ ಆವೃತ್ತಿಯಗೆ ಭರ್ಜರಿ ಆರಂಭ ಸಿಕ್ಕಿದ್ದು, ಮೊದಲ ಎರಡು ಪಂದ್ಯ ಕೊನೆಯ ಎಸೆತದವರೆಗೂ ಸಾಗಿತ್ತು. ಶನಿವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಯುಪಿ ವಾರಿಯರ್ಸ್ (RCB vs UPW) ನಡುವಣ ಪಂದ್ಯ ಕೂಡ ರಣರೋಚಕವಾಗಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯ ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿತ್ತು. ಇದರಲ್ಲಿ ಸ್ಮೃತಿ ಮಂಧಾನ ನೇತೃತ್ವದ ಆರ್​ಸಿಬಿ 2 ರನ್​ಗಳ ಜಯ ಸಾಧಿಸಿತು. ಹೋಮ್ ಗ್ರೌಂಡ್ ಆಗಿರುವುದರಿಂದ ರಾಯಲ್ ಚಾಲೆಂಜರ್ಸ್ ಅಭಿಮಾನಿಗಳು ಮೈದಾನದಲ್ಲಿ ಕಿಕ್ಕಿರಿದು ತುಂಬಿದ್ದರು. ಇಡೀ ಸ್ಟೇಡಿಯಂ ಹೌಸ್​ಫುಲ್ ಆಗಿತ್ತು. ಶುಕ್ರವಾರ ನಡೆದ ಉದ್ಘಾಟನಾ ಸಮಾರಂಭಕ್ಕೂ ಈ ಮಟ್ಟಿನಲ್ಲಿ ಅಭಿಮಾನಿಗಳು ಬಂದಿರಲಿಲ್ಲ. ಆರ್​ಸಿಬಿ ಗೆದ್ದ ತಕ್ಷಣವಂತು ಚಿನ್ನಸ್ವಾಮಿಯಲ್ಲಿ ಅಭಿಮಾನಿಗಳ ಹರುಷ ಮುಗಿಲು ಮುಟ್ಟಿತ್ತು. ಇಡೀ ಸ್ಟೇಡಿಯಂನಲ್ಲಿ ”ಆರ್​ಸಿಬಿ, ಆರ್​ಸಿಬಿ” ಎಂದು ಉತ್ಸಾಹಭರಿತದಿಂದ ಕೂಗಿದರು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಹಾಗೆಯೆ ಟಾಸ್​ಗೆ ಬರುವ ವೇಳೆ ಮೈದಾನದಲ್ಲಿದ್ದ ಅಭಿಮಾನಿಗಳನ್ನು ಕಂಡು ನಾಯಕಿ ಸ್ಮೃತಿ ಮಂಧಾನ, ”ನಮಗೆ ಅದ್ಭುತ ಬೆಂಬಲ ಸಿಗುತ್ತಿದೆ,” ಎಂದಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vinay Bhat

Tv9 ಕನ್ನಡ ಡಿಜಿಟಲ್‌ನಲ್ಲಿ 2021ರ ಜುಲೈನಿಂದ ಕ್ರೀಡಾ ಹಾಗೂ ತಂತ್ರಜ್ಞಾನ ಪತ್ರಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಡಿಜಿಟಲ್ ವಿಭಾಗದಲ್ಲಿ 6 ವರ್ಷ ಅನುಭವ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನವ. ಕ್ರೀಡಾ ಸುದ್ದಿ, ಕ್ರೀಡಾ ಲೇಖನ, ಟೆಕ್ನಾಲಜಿ, ಸಿನಿಮಾ ಸುದ್ದಿ ಬರೆಯುವುದು ನನ್ನ ಆಸಕ್ತದಾಯಕ ವಿಷಯಗಳು.

Read More