IPL 2025: ಜಿತೇಶ್ ಗೆಲುವಿನ ಸಿಕ್ಸರ್ ಬಾರಿಸುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಕೊಹ್ಲಿ; ವಿಡಿಯೋ ನೋಡಿ
RCB Beats LSG by 6 Wickets : ಐಪಿಎಲ್ 2024ರ ಲೀಗ್ ಹಂತದ ಅಂತಿಮ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು , ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿದೆ. ಲಕ್ನೋ 228 ರನ್ ಗಳಿಸಿದರೂ, ಜಿತೇಶ್ ಶರ್ಮಾ, ಮಯಾಂಕ್ ಅಗರ್ವಾಲ್ ಮತ್ತು ವಿರಾಟ್ ಕೊಹ್ಲಿ ಅವರ ಅದ್ಭುತ ಬ್ಯಾಟಿಂಗ್‌ನಿಂದ ಆರ್‌ಸಿಬಿ 18.4 ಓವರ್‌ಗಳಲ್ಲಿ ಗೆಲುವು ಸಾಧಿಸಿತು. ನಾಯಕ ಜಿತೇಶ್ ಶರ್ಮಾ ಗೆಲುವಿನ ಸಿಕ್ಸರ್ ಬಾರಿಸುತ್ತಿದ್ದಂತೆ ಆರ್‌ಸಿಬಿ ಡಗೌಟ್ನಲ್ಲಿ ಕುಳಿತಿದ್ದ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಇತರ ಆಟಗಾರರು ಕುಣಿದು ಕುಪ್ಪಳಿಸಿದರು.
ಐಪಿಎಲ್ 18ನೇ ಸೀಸನ್‌ನ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ನಾಯಕ ಜಿತೇಶ್ ಶರ್ಮಾ, ಮಯಾಂಕ್ ಅಗರ್ವಾಲ್ ಮತ್ತು ವಿರಾಟ್ ಕೊಹ್ಲಿ ಅವರ ಅಬ್ಬರದ ಇನ್ನಿಂಗ್ಸ್ನಿಂದಾಗಿ ಆರ್‌ಸಿಬಿ ಇನ್ನು 8 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆ ಬೀರಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಲಕ್ನೋ ತಂಡ ಆರ್‌ಸಿಬಿಗೆ 228 ರನ್‌ಗಳ ಗುರಿಯನ್ನು ನೀಡಿತು. ಈ ಗುರಿ ಬೆನ್ನಟ್ಟಿದ ಆರ್‌ಸಿಬಿ 18.4 ಓವರ್‌ಗಳಲ್ಲಿ 4 ವಿಕೆಟ್‌ಗಳನ್ನು ಕಳೆದುಕೊಂಡು ಈ ಸವಾಲನ್ನು ಪೂರ್ಣಗೊಳಿಸಿತು. ನಾಯಕ ಜಿತೇಶ್ ಶರ್ಮಾ ಗೆಲುವಿನ ಸಿಕ್ಸರ್ ಬಾರಿಸುತ್ತಿದ್ದಂತೆ ಆರ್‌ಸಿಬಿ ಡಗೌಟ್ನಲ್ಲಿ ಕುಳಿತಿದ್ದ ವಿರಾಟ್ ಕೊಹ್ಲಿ ಸೇರಿದಂತೆ ತಂಡದ ಇತರ ಆಟಗಾರರು ಕುಣಿದು ಕುಪ್ಪಳಿಸಿದರು.