Bengaluru RCB Victory Celebrations Stampede: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್ ಇಲ್ಲಿದೆ ನೋಡಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅನ್ನು 6 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿದೆ. ಇದು ಆರ್‌ಸಿಬಿ ಅಭಿಮಾನಿಗಳ 17 ವರ್ಷಗಳ ಕಾತರದ ಕನಸಿನ ನೆರವೇರಿಕೆಯಾಗಿದೆ. ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದು, ವಿಧಾನಸೌಧದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆದಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ತಂಡವನ್ನು ಸ್ವಾಗತಿಸಲು ಕಿಕ್ಕಿರಿದು ಸೇರಿದ್ದಾರೆ.
ಆರ್‌ಸಿಬಿ ಅಭಿಮಾನಿಗಳ 17 ವರ್ಷಗಳ ಕನಸು ನನಸಾಗಿದೆ. ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿದ್ದಾರೆ. 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್‌ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಸಂಭ್ರಮಚಾರಣೆ ವೇಳೆ ಕಾಲ್ತುಳಿತ ಸಂಭವಿಸಿ 10 ಮಂದಿ ಮೃತಪಟ್ಟಿದ್ದಾರೆ. ಮಂಗಳವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್‌ಗಳಿಂದ ಮಣಿಸಿದ ಆರ್‌ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ.
Published on: Jun 04, 2025 02:53 PM