Bengaluru RCB Victory Celebrations Stampede: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​ ಇಲ್ಲಿದೆ ನೋಡಿ

Updated on: Jun 04, 2025 | 7:58 PM

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಅನ್ನು 6 ರನ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿದೆ. ಇದು ಆರ್‌ಸಿಬಿ ಅಭಿಮಾನಿಗಳ 17 ವರ್ಷಗಳ ಕಾತರದ ಕನಸಿನ ನೆರವೇರಿಕೆಯಾಗಿದೆ. ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದು, ವಿಧಾನಸೌಧದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆದಿದೆ. ಅಭಿಮಾನಿಗಳು ತಮ್ಮ ನೆಚ್ಚಿನ ತಂಡವನ್ನು ಸ್ವಾಗತಿಸಲು ಕಿಕ್ಕಿರಿದು ಸೇರಿದ್ದಾರೆ.

ಆರ್​ಸಿಬಿ ಅಭಿಮಾನಿಗಳ 17 ವರ್ಷಗಳ ಕನಸು ನನಸಾಗಿದೆ. ಐಪಿಎಲ್​ ಚಾಂಪಿಯನ್ಸ್​ ಟ್ರೋಫಿಗೆ ಮುತ್ತಿಟ್ಟಿದ್ದಾರೆ. 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ. ವಿಧಾನಸೌಧ ಮೆಟ್ಟಿಲುಗಳ ಮೇಲೆ ಅಭಿನಂದನಾ ಕಾರ್ಯಕ್ರಮ ನಡೆಯುತ್ತಿದೆ. ಆರ್​​ಸಿಬಿ ಆಟಗಾರರನ್ನು ಸ್ವಾಗತಿಸಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಸಂಭ್ರಮಚಾರಣೆ ವೇಳೆ ಕಾಲ್ತುಳಿತ ಸಂಭವಿಸಿ 10 ಮಂದಿ ಮೃತಪಟ್ಟಿದ್ದಾರೆ. ಮಂಗಳವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್​​ಗಳಿಂದ ಮಣಿಸಿದ ಆರ್​ಸಿಬಿ ಚೊಚ್ಚಲ ಐಪಿಎಲ್ ಕಿರೀಟವನ್ನು ತನ್ನ ಮುಡಿಗೇರಿಸಿಕೊಂಡಿದೆ.

Published on: Jun 04, 2025 02:53 PM