ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪಂಜಾಬ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ 18 ವರ್ಷಗಳ ನಂತರ ಐಪಿಎಲ್ ಚಾಂಪಿಯನ್ಸ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ. MG ರೋಡ್, ಚರ್ಚ್ ಸ್ಟ್ರೀಟ್ ಮುಂತಾದೆಡೆ ಸಂಭ್ರಮ ಮುಗಿಲು ಮುಟ್ಟಿದೆ. ಪಟಾಕಿ ಸಿಡಿಸುವುದು, ಹಾಡುಗಳಿಗೆ ನೃತ್ಯ ಮಾಡುವುದು ಸೇರಿದಂತೆ ವಿವಿಧ ರೀತಿಯಲ್ಲಿ ಅಭಿಮಾನಿಗಳು ತಮ್ಮ ಸಂತೋಷವನ್ನು ವ್ಯಕ್ತಪಡಿಸಿದ್ದಾರೆ.
ಪಂಜಾಬ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿ ಗೆಲವು ಸಾಧಿಸಿದೆ. ಈ ಮೂಲಕ ಆರ್ಸಿಬಿ ಐಪಿಎಲ್ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿದೆ. ಆರ್ಸಿಬಿ ಗೆಲ್ಲುತ್ತಿದ್ದಂತೆ ಬೆಂಗಳೂರು, ತಮಕೂರು, ಹಾಸನ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಬೆಂಗಳೂರಿನ MG ರೋಡ್, ಚರ್ಚ್ಸ್ಟ್ರೀಟ್, ವಿಜಯನಗರ ಸೇರಿದಂತೆ ಹಲವು ಏರಿಯಾಗಳಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚರ್ಚ್ಸ್ಟ್ರೀಟ್ನಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇನ್ನು, ಪಬ್ ಮತ್ತು ಹೋಟೆಲ್ಗಳಲ್ಲಿ ಡಿಜೆ ಸಾಂಗ್ಗೆ ಅಭಿಮಾನಿಗಳು ಸಕತ್ ಸ್ಟೆಪ್ ಹಾಕುತ್ತಿದ್ದಾರೆ. ಈ ಸಲ ಕಪ್ ನಮ್ದು, ಜೈ ಆರ್ಸಿಬಿ ಎಂದು ಘೋಷಣೆಗಳನ್ನು ಹಾಕುತ್ತಿದ್ದಾರೆ.
Published on: Jun 03, 2025 11:52 PM
