ಆರ್​ಸಿಬಿ ಐಪಿಎಲ್ ಟ್ರೋಫಿ ಗೆದ್ದ ಬೆನ್ನಲ್ಲೇ ಬೆಂಗಳೂರಿನಲ್ಲಿ ದೀಪಾವಳಿ! ಬಾನಂಗಳದಲ್ಲಿ ಪಟಾಕಿಗಳ ಚಿತ್ತಾರ

Updated on: Jun 04, 2025 | 7:53 AM

ಕೊನೆಗೂ ಆರ್​ಸಿಬಿ ಐಪಿಎಲ್ ಟ್ರೋಫಿ ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದೆ. 18 ವರ್ಷಗಳ ಕನಸು ನನಸಾಗಿದೆ. ಈ ಸಂಭ್ರಮದಲ್ಲಿ ಇಡೀ ಬೆಂಗಳೂರಿನಲ್ಲಿ ಅಭಿಮಾನಿಗಳು ಹುಚ್ಚೆದ್ದು ಕುಣಿದರು. ಪಟಾಕಿ ಸಿಡಿಸಿ ಸಂಭ್ರಮಿಸಿದರು. ಇದರ ಪರಿಣಾಮ, ಬೆಂಗಳೂರಿನಲ್ಲಿ ದೀಪಾವಳಿ ಹಬ್ಬದ ಆಚರಣೆ ನಡೆಯುತ್ತಿದೆಯೇನೋ ಎಂಬಂತೆ ಭಾಸವಾಯಿತು. ವಿಡಿಯೋ ಇಲ್ಲಿದೆ ನೋಡಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್​ಸಿಬಿ) ತಂಡ ಕಳೆದ 18 ವರ್ಷಗಳಲ್ಲಿ ಮೊದಲ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿದ ಬೆನ್ನಲ್ಲೇ ಬೆಂಗಳೂರಿನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲುಮುಟ್ಟಿತು. ಮಧ್ಯರಾತ್ರಿ ಬೆಂಗಳೂರಿನಾದ್ಯಂತ ಅಭಿಮಾನಿಗಳು ಪಟಾಕಿಗಳನ್ನು ಸಿಡಿಸಿ ಸಂಭ್ರಮಿಸಿದರು. ಬಾನಂಗಳದಲ್ಲಿ ಪಟಾಕಿಗಳು ಮೂಡಿಸಿದ ಬೆಳಕಿನ ಚಿತ್ತಾರ ದೀಪಾವಳಿ ಸಂಭ್ರಮ ನೆನಪಿಸಿತು. ಆರ್​ಸಿಬಿ ಅಭಿಮಾನಿಗಳ ಸಂಭ್ರಮಾಚರಣೆ, ಪಟಾಕಿ ಸಿಡಿಸಿದ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

 

Published on: Jun 04, 2025 07:52 AM
Follow Us
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More