ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್ಸಿಬಿಯಿಂದ ವಿಶೇಷ ನಮನ: ವಿಡಿಯೋ ನೋಡಿ
RCB ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ದುರಂತ ಸಾವಿಗೀಡಾಗಿದ್ದು, ಅವರಿಗೆ ಗೌರವ ಸಲ್ಲಿಸಲು RCB ವಿಶೇಷ ನಿರ್ಧಾರ ಕೈಗೊಂಡಿದೆ. ಆಟಗಾರರು 11ನೇ ನಂಬರ್ ಜರ್ಸಿಯಲ್ಲಿ ಅಭ್ಯಾಸ ಮಾಡಲಿದ್ದು, ಕ್ರೀಡಾಂಗಣದಲ್ಲಿ 11 ಆಸನಗಳನ್ನು ಖಾಲಿ ಬಿಡಲಾಗುತ್ತದೆ ಎಂದು ಉಪಾಧ್ಯಕ್ಷ ರಾಜೇಶ್ ಮೆನನ್ ಬೆಂಗಳೂರಿನಲ್ಲಿ ಘೋಷಿಸಿದ್ದಾರೆ.
ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಕ್ರೇಜ್ ಜೋರಾಗಿದೆ. ಆರ್‌ಸಿಬಿ ಆಟ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಹೀಗಾಗಿ ಆರ್‌ಸಿಬಿ ಆಡಳಿತ ಮಂಡಳಿ ಇಂದು ಸುದ್ದಿಗೋಷ್ಠಿ ಮಾಡಿದ್ದು, ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಜನ ಸಾವು ಹಿನ್ನೆಲೆ ಆಟಗಾರರು 11 ನಂಬರ್ನ ಜರ್ಸಿಯಲ್ಲಿ ಅಭ್ಯಾಸ ಮಾಡಲಿದ್ದಾರೆ. ಜೊತೆಗೆ ತೋಳಿಗೆ ಕಪ್ಪು ಬಣ್ಣದ ಬ್ಯಾಂಡ್ ಕೂಡ ಧರಿಸಲಿದ್ದಾರೆ. ಇನ್ನು ಕ್ರೀಡಾಂಗಣದಲ್ಲಿ 11 ಸೀಟ್ಗಳನ್ನು ಖಾಲಿ ಬಿಡಲಿದ್ದೇವೆ. ಇದು ಕಾಲ್ತುಳಿತದಲ್ಲಿ ಮೃತಪಟ್ಟ ಆರ್‌ಸಿಬಿ ಅಭಿಮಾನಿಗಳಿಗೆ ಅರ್ಪಣೆ ಎಂದು RCB ತಂಡದ ಉಪಾಧ್ಯಕ್ಷ ರಾಜೇಶ್ ಮೆನನ್ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 24, 2026 05:55 PM
Follow Us
Latest Videos

