ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ: ವಿಡಿಯೋ ನೋಡಿ

Updated on: Mar 24, 2026 | 5:57 PM

RCB ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ದುರಂತ ಸಾವಿಗೀಡಾಗಿದ್ದು, ಅವರಿಗೆ ಗೌರವ ಸಲ್ಲಿಸಲು RCB ವಿಶೇಷ ನಿರ್ಧಾರ ಕೈಗೊಂಡಿದೆ. ಆಟಗಾರರು 11ನೇ ನಂಬರ್ ಜರ್ಸಿಯಲ್ಲಿ ಅಭ್ಯಾಸ ಮಾಡಲಿದ್ದು, ಕ್ರೀಡಾಂಗಣದಲ್ಲಿ 11 ಆಸನಗಳನ್ನು ಖಾಲಿ ಬಿಡಲಾಗುತ್ತದೆ ಎಂದು ಉಪಾಧ್ಯಕ್ಷ ರಾಜೇಶ್‌ ಮೆನನ್‌ ಬೆಂಗಳೂರಿನಲ್ಲಿ ಘೋಷಿಸಿದ್ದಾರೆ.

ಐಪಿಎಲ್ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಎಲ್ಲೆಡೆ ಕ್ರೇಜ್​ ಜೋರಾಗಿದೆ. ಆರ್​ಸಿಬಿ ಆಟ ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ. ಹೀಗಾಗಿ ಆರ್‌ಸಿಬಿ ಆಡಳಿತ ಮಂಡಳಿ ಇಂದು ಸುದ್ದಿಗೋಷ್ಠಿ ಮಾಡಿದ್ದು, ಕೆಲ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಆರ್​ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದಿಂದ 11 ಜನ ಸಾವು ಹಿನ್ನೆಲೆ ಆಟಗಾರರು 11 ನಂಬರ್​ನ ಜರ್ಸಿಯಲ್ಲಿ ಅಭ್ಯಾಸ ಮಾಡಲಿದ್ದಾರೆ. ಜೊತೆಗೆ ತೋಳಿಗೆ ಕಪ್ಪು ಬಣ್ಣದ ಬ್ಯಾಂಡ್​ ಕೂಡ ಧರಿಸಲಿದ್ದಾರೆ. ಇನ್ನು ಕ್ರೀಡಾಂಗಣದಲ್ಲಿ 11 ಸೀಟ್​ಗಳನ್ನು ಖಾಲಿ ಬಿಡಲಿದ್ದೇವೆ. ಇದು ಕಾಲ್ತುಳಿತದಲ್ಲಿ ಮೃತಪಟ್ಟ ಆರ್​ಸಿಬಿ ಅಭಿಮಾನಿಗಳಿಗೆ ಅರ್ಪಣೆ ಎಂದು RCB ತಂಡದ ಉಪಾಧ್ಯಕ್ಷ ರಾಜೇಶ್‌ ಮೆನನ್‌ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Mar 24, 2026 05:55 PM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More