AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್​

24 ಫೋರ್, 2 ಭರ್ಜರಿ ಸಿಕ್ಸ್​: ಸಿಡಿಲಬ್ಬರದ ಸೆಂಚುರಿ ಸಿಡಿಸಿದ ಜೋರ್ಡನ್ ಕಾಕ್ಸ್​

ಝಾಹಿರ್ ಯೂಸುಫ್
|

Updated on: Jun 13, 2026 | 12:15 PM

Share

JORDAN COX: 2026ರ ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜೋರ್ಡನ್ ಕಾಕ್ಸ್ ಅವರನ್ನು ₹75 ಲಕ್ಷಕ್ಕೆ ಖರೀದಿಸಿತ್ತು. ಅದರಂತೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕಾಕ್ಸ್​ಗೆ ಒಂದೇ ಒಂದು ಮ್ಯಾಚ್​ನಲ್ಲಿ ಬ್ಯಾಟ್ ಬೀಸಲು ಅವಕಾಶ ಸಿಕ್ಕಿರಲಿಲ್ಲ. ಇದಾಗ್ಯೂ ಸಬ್‌ಸ್ಟಿಟ್ಯೂಟ್ ಫೀಲ್ಡರ್ ಆಗಿ ತಂಡಕ್ಕೆ ನೆರವಾಗಿದ್ದರು.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಆಟಗಾರ ಜೋರ್ಡನ್ ಕಾಕ್ಸ್ ಕೌಂಟಿ ಕ್ರಿಕೆಟ್​​ನಲ್ಲಿ ಸಿಡಿಲಬ್ಬರದ ಶತಕ ಸಿಡಿಸಿದ್ದಾರೆ. ಇಂಗ್ಲೆಂಡ್​ನ ಲೀಸೆಸ್ಟರ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಕೌಂಟಿ ಚಾಂಪಿಯನ್​​ಶಿಪ್​ನ 33ನೇ ಪಂದ್ಯದಲ್ಲಿ ಲೀಸೆಸ್ಟರ್‌ಶೈರ್ vs ಎಸೆಕ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್​ನಲ್ಲಿ ಟಾಸ್ ಗೆದ್ದ ಲೀಸೆಸ್ಟರ್‌ಶೈರ್ ತಂಡದ ನಾಯಕ ಬೆನ್ ಗ್ರೀನ್ ಬೌಲಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಎಸೆಕ್ಸ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕರಾಗಿ ಕಣಕ್ಕಿಳಿದ ಡೀನ್ ಎಲ್ಗರ್ (3) ಹಾಗೂ ಪೌಲ್ ವಾಲ್ಟರ್ (2) ಬೇಗನೆ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಜೋರ್ಡನ್ ಕಾಕ್ಸ್​ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು.

ಕ್ರೀಸ್​ಗೆ ಆಗಮಿಸುತ್ತಿದ್ದಂತೆ ಆಕ್ರಮಣಕಾರಿ ಬ್ಯಾಟಿಂಗ್​ಗೆ ಒತ್ತು ನೀಡಿದ ಕಾಕ್ಸ್​ ಶತಕ ಪೂರೈಸಿದ್ದು ಕೇವಲ 73 ಎಸೆತಗಳಲ್ಲಿ ಎಂಬುದು ವಿಶೇಷ. ಅಂದರೆ ಟೆಸ್ಟ್ ಪಂದ್ಯದಲ್ಲಿ ಸ್ಫೋಟಕ ಸೆಂಚುರಿ ಸಿಡಿಸಿ ಮಿಂಚಿದ್ದಾರೆ.

ಶತಕದ ಬಳಿಕ ಎಚ್ಚರಿಕೆಯ ಆಟಕ್ಕೆ ಒತ್ತು ನೀಡಿದ ಜೋರ್ಡನ್ಸ್ ಕಾಕ್ಸ್ 177 ಎಸೆತಗಳನ್ನು ಎದುರಿಸಿ 24 ಫೋರ್ ಹಾಗೂ 2 ಸಿಕ್ಸ್ ಸಿಡಿಸಿದ್ದಾರೆ. ಈ ಮೂಲಕ ಮೊದಲ ದಿನದಾಟದ ಅಂತ್ಯಕ್ಕೆ ಕಾಕ್ಸ್ 177 ಎಸೆತಗಳಲ್ಲಿ ಅಜೇಯ 184 ರನ್ ಬಾರಿಸಿದ್ದಾರೆ.

ಜೋರ್ಡನ್ ಕಾಕ್ಸ್ ಅವರ ಈ ಸಿಡಿಲಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಎಸೆಕ್ಸ್ ತಂಡವು ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 342 ರನ್​ ಕಲೆಹಾಕಿದೆ.

ಆರ್​ಸಿಬಿ ತಂಡದ ಆಟಗಾರ:

2026ರ ಐಪಿಎಲ್ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಜೋರ್ಡನ್ ಕಾಕ್ಸ್ ಅವರನ್ನು ₹75 ಲಕ್ಷಕ್ಕೆ ಖರೀದಿಸಿತ್ತು. ಅದರಂತೆ ಈ ಬಾರಿ ಆರ್​ಸಿಬಿ ತಂಡದಲ್ಲಿ ಕಾಣಿಸಿಕೊಂಡಿದ್ದ ಕಾಕ್ಸ್​ಗೆ ಒಂದೇ ಒಂದು ಮ್ಯಾಚ್​ನಲ್ಲಿ ಬ್ಯಾಟ್ ಬೀಸಲು ಅವಕಾಶ ಸಿಕ್ಕಿರಲಿಲ್ಲ. ಇದಾಗ್ಯೂ ಸಬ್‌ಸ್ಟಿಟ್ಯೂಟ್ ಫೀಲ್ಡರ್ ಆಗಿ ತಂಡಕ್ಕೆ ನೆರವಾಗಿದ್ದರು.

ಇಂಗ್ಲೆಂಡ್ ಟೆಸ್ಟ್ ತಂಡಕ್ಕೆ ಎಂಟ್ರಿ:

ನ್ಯೂಝಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಪಂದ್ಯಕ್ಕೆ ಜೋರ್ಡನ್ ಕಾಕ್ಸ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್​ ಅವರನ್ನು ಈ ಪಂದ್ಯದಿಂದ ಕೈ ಬಿಡಲಾಗಿರುವ ಕಾರಣ, ಕಾಕ್ಸ್​ ಅವರಿಗೆ ಚಾನ್ಸ್ ಸಿಕ್ಕಿದೆ. ಇದೀಗ ಎರಡು ಟೆಸ್ಟ್ ಪಂದ್ಯಕ್ಕೂ ಮುನ್ನ ಸಿಡಿಲಬ್ಬರದ ಸೆಂಚುರಿ ಸಿಡಿಸುವ ಮೂಲಕ ಜೋರ್ಡನ್ ಕಾಕ್ಸ್ ಎಲ್ಲರ ಗಮನ ಸೆಳೆದಿದ್ದಾರೆ.

 

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More