7 ಭರ್ಜರಿ ಸಿಕ್ಸ್… ಸ್ವಸ್ತಿಕ್ ಚಿಕಾರ ಸಿಡಿಲಬ್ಬರಕ್ಕೆ ಎದುರಾಳಿ ಪಡೆ ತತ್ತರ
Meerut Mavericks vs Noida Kings: ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಿಂಕು ಸಿಂಗ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೋಯ್ಡಾ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು.
ಉತ್ತರ ಪ್ರದೇಶ್ ಟಿ20 ಲೀಗ್ನ 29ನೇ ಪಂದ್ಯದಲ್ಲಿ ಸ್ವಸ್ತಿಕ್ ಚಿಕಾರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ ಸ್ವಸ್ತಿಕ್ ನೋಯ್ಡಾ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದರು.
ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಿಂಕು ಸಿಂಗ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೋಯ್ಡಾ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು.
201 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮೀರತ್ ಮಾವೆರಿಕ್ಸ್ ತಂಡಕ್ಕೆ ಸ್ವಸ್ತಿಕ್ ಚಿಕಾರ ಸಿಡಿಲಬ್ಬರದ ಆರಂಭ ಒದಗಿಸಿದರು. 38 ಎಸೆತಗಳನ್ನು ಎದುರಿಸಿದ ಚಿಕಾರ 7 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 64 ರನ್ ಚಚ್ಚಿದರು.
ಆ ಬಳಿಕ ಬಂದ ರಿಂಕು ಸಿಂಗ್ 12 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 37 ರನ್ ಬಾರಿಸಿದರು. ಈ ಮೂಲಕ ಮೀರತ್ ಮಾವೆರಿಕ್ಸ್ ತಂಡವು 18.3 ಓವರ್ಗಳಲ್ಲಿ 202 ರನ್ಗಳಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ರಿಂಕು ಸಿಂಗ್ ಮುಂದಾಳತ್ವದ ಮೀರತ್ ಮಾವೆರಿಕ್ಸ್ ತಂಡ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ.

