6,6,6,6,6,6: ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ
Tim David: ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ಕ್ರೀಸ್ಗೆ ಆಗಮಿಸುತ್ತಿದ್ದಂತೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅಡಿಲೇಡ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಡೇವಿಡ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ 28 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 62 ರನ್ ಚಚ್ಚಿದರು.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಿಗ್ ಬ್ಯಾಷ್ನಲ್ಲಿ ಟಿಮ್ ಡೇವಿಡ್ ಸ್ಪೋಟಕ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಬೆಲ್ಲೆರಿವ್ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಹೊಬಾರ್ಟ್ ಹರಿಕೇನ್ಸ್ ಮತ್ತು ಅಡಿಲೇಡ್ ಸ್ಟ್ರೈಕರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಅಡಿಲೇಡ್ ಸ್ಟ್ರೈಕರ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು.
187 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಹೊಬಾರ್ಟ್ ಹರಿಕೇನ್ಸ್ ತಂಡಕ್ಕೆ ಮ್ಯಾಥ್ಯೂ ವೇಡ್ (22) ಹಾಗೂ ಮಿಚೆಲ್ ಒವೆನ್ (37) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ಇಡೀ ಪಂದ್ಯದ ಚಿತ್ರಣ ಬದಲಿಸಿದರು.
ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಟಿಮ್ ಡೇವಿಡ್ ಕ್ರೀಸ್ಗೆ ಆಗಮಿಸುತ್ತಿದ್ದಂತೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಅಡಿಲೇಡ್ ಬೌಲರ್ಗಳನ್ನು ಮನಸೋ ಇಚ್ಛೆ ದಂಡಿಸಿದ ಡೇವಿಡ್ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಷ್ಟೇ ಅಲ್ಲದೆ 28 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 62 ರನ್ ಚಚ್ಚಿದರು. ಈ ಮೂಲಕ 18.4 ಓವರ್ಗಳಲ್ಲಿ 187 ರನ್ಗಳ ಗುರಿ ಮುಟ್ಟುವ ಮೂಲಕ ಹೊಬಾರ್ಟ್ ಹರಿಕೇನ್ಸ್ ತಂಡವು 5 ವಿಕೆಟ್ಗಳ ಜಯ ಸಾಧಿಸಿತು.
ಅಂದಹಾಗೆ ಟಿಮ್ ಡೇವಿಡ್ ಈ ಬಾರಿಯ ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಕಣಕ್ಕಿಳಿಯಲಿದ್ದಾರೆ. ಅದಕ್ಕೂ ಮುನ್ನ ಬಿಗ್ ಬ್ಯಾಷ್ ಲೀಗ್ ಆಡುತ್ತಿರುವ ಟಿಮ್ ಭರ್ಜರಿ ಪ್ರದರ್ಶನದೊಂದಿಗೆ ಅಬ್ಬರಿಸುತ್ತಿದ್ದಾರೆ. ಈ ಅಬ್ಬರವು ಆರ್ಸಿಬಿ ಪಾಲಿಗೆ ಶುಭ ಸೂಚನೆ ಎನ್ನಬಹುದು.