SRH vs RCB: 3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್
RCB's Costly Blunders: ಹೈದರಾಬಾದ್‌ನಲ್ಲಿ ನಡೆದ RCB vs SRH ಲೀಗ್ ಪಂದ್ಯದಲ್ಲಿ ಸನ್‌ರೈಸರ್ಸ್‌ನ ಅಭಿಷೇಕ್ ಶರ್ಮಾ ಕೇವಲ 20 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿ ಮಿಂಚಿದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಳಪೆ ಫೀಲ್ಡಿಂಗ್ ಇದಕ್ಕೆ ಪ್ರಮುಖ ಕಾರಣ. ಅಭಿಷೇಕ್ ಶರ್ಮಾ ಅವರ ಮೂರು ನಿರ್ಣಾಯಕ ಕ್ಯಾಚ್‌ಗಳನ್ನು ಆರ್‌ಸಿಬಿ ಫೀಲ್ಡರ್‌ಗಳು ಕೈಚೆಲ್ಲಿದ್ದರಿಂದ ಅವರು ಇದರ ಲಾಭ ಪಡೆದು ತಂಡಕ್ಕೆ ಉತ್ತಮ ಆರಂಭ ಒದಗಿಸಿದರು.
ಹೈದರಾಬಾದ್‌ನಲ್ಲಿ ನಡೆಯುತ್ತಿರುವ ತಮ್ಮ ಕೊನೆಯ ಲೀಗ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆ ತಂಡದ ಆರಂಭಿಕರಾದ ಟ್ರಾವಿಡ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಉತ್ತಮ ಆರಂಭವನ್ನೇ ಒದಗಿಸಿಕೊಟ್ಟರು. ಇವರಿಬ್ಬರು ಮೊದಲ ವಿಕೆಟ್ಗೆ 45 ರನ್ಗಳ ಜೊತೆಯಾಟ ನೀಡಿದರು. ಹೆಡ್ ವಿಕೆಟ್ ಪತನದೊಂದಿಗೆ ಇವರಿಬ್ಬರ ಜೊತೆಯಾಟ ಮುರಿದು ಬಿತ್ತು.
ಹೆಡ್ ವಿಕೆಟ್ ಪತನದ ಬೆನ್ನಲ್ಲೇ ಅಭಿಷೇಕ್ ಶರ್ಮಾ ಕೂಡ ಔಟಾಗುವುದರಲ್ಲಿದ್ದರು. ಆದರೆ ಆರ್‌ಸಿಬಿ ಫೀಲ್ಡರ್ಗಳ ಕಳಪೆ ಫೀಲ್ಡಿಂಗ್ನಿಂದ ವಿಕೆಟ್ ಕೈತಪ್ಪಿತು. ಆರ್‌ಸಿಬಿ ಅಭಿಷೇಕ್ ಅವರ ಒಟ್ಟು ಮೂರು ಕ್ಯಾಚ್‌ಗಳನ್ನು ಕೈಚೆಲ್ಲಿತು. ಇದರ ಲಾಭ ಪಡೆದ ಅಭಿಷೇಕ್ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಮೊದಲಿಗೆ 6ನೇ ಓವರ್‌ನಲ್ಲಿ ಡೀಪ್ ಸ್ಕ್ವೇರ್ ಲೆಗ್‌ನಲ್ಲಿ ವೆಂಕಟೇಶ್ ಅಯ್ಯರ್ ಕ್ಯಾಚ್ ಬಿಟ್ಟರು. ನಂತರ 7ನೇ ಓವರ್‌ನಲ್ಲಿ ಜೋರ್ಡಾನ್ ಕಾಕ್ಸ್ , ಅಭಿಷೇಕ್ಗೆ 2ನೇ ಜೀವದಾನ ನೀಡಿದರು. 8ನೇ ಓವರ್ನ ಮೊದಲ ಎಸೆತದಲ್ಲಿ ದೇವದತ್ ಪಡಿಕ್ಕಲ್ ಕೂಡ ಕ್ಯಾಚ್ ಡ್ರಾಪ್ ಮಾಡಿದರು. ಈ ಮೂರು ಜೀವದಾನಗಳ ಲಾಭ ಪಡೆದ ಅಭಿಷೇಕ್ ಶರ್ಮಾ 20 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಹತ್ತನೇ ಓವರ್‌ನಲ್ಲಿ ಸುಯಾಶ್ ಶರ್ಮಾಗೆ ಬಲಿಯಾದರು.
ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ
ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ
ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ
ನಿಯಂತ್ರಣ ತಪ್ಪಿದ ಬೈಕ್ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ


