Minister questions Sulibele’ s stature: ಚಕ್ರವರ್ತಿ ಸೂಲಿಬೆಲೆಗೆ ಪಠ್ಯಗಳಿಗೆ ಪಾಠ ಬರೆಯುವ ಯೋಗ್ಯತೆ ಇದೆಯೇ? ಪ್ರಿಯಾಂಕ್ ಖರ್ಗೆ, ಸಚಿವ

ಅರುಣ್​ ಕುಮಾರ್​ ಬೆಳ್ಳಿ

Updated on: Jun 09, 2023 | 2:35 PM

ಸೂಲಿಬೆಲೆಯಂಥವರನ್ನು ಸಾಹಿತಿ ಅಂತ ಪರಿಗಣಿಸುವಷ್ಟು ಬರಗೆಟ್ಟು ಹೋಗಿದೆಯಾ ರಾಜ್ಯದ ಸಾರಸ್ವತ ಲೋಕ ಎಂದು ಖರ್ಗೆ ಪ್ರಶ್ನಿಸಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಪಠ್ಯ ಪುಸ್ತಕಗಳ ಪರಿಷ್ಕರಣೆ ಕುರಿತಂತೆ ಲೇಖಕ, ಭಾಷಣಕಾರ ಚಕ್ರವರ್ತಿ ಸೂಲಿಬೆಲೆಯವರ (Chakravarthy Sulibele) ಅರ್ಹತೆ ಮತ್ತು ಯೋಗ್ಯತೆಯನ್ನು ಪ್ರಶ್ನಿಸಿದರು. ಬಾಡಿಗೆ ಭಾಷಣಕಾರ ಮತ್ತು ವಾಟ್ಸ್ಯಾಪ್ ಯೂನಿವರ್ಸಿಟಿಗಳ (WhatsApp) ಉಪ ಕುಲಪತಿಗಳು ಬರೆಯುವ ಪಾಠಗಳನ್ನು ನಮ್ಮ ಮಕ್ಕಳು ಓದಬೇಕೆ? ಪಠ್ಯ ಬರೆಯುವ ಯೋಗ್ಯತೆ ಅವರಿಗಿದೆಯೇ ಎಂದು ಖರ್ಗೆ ಕೇಳಿದರು. ಚಕ್ರವರ್ತಿ ಸೂಲಿಬೆಲೆ ಯಾವುದಾರರೂ ವಿಷಯದಲ್ಲಿ ಡಾಕ್ಟರೇಟ್ ಪದವಿ ಪಡೆದಿದ್ದಾರೆಯೇ? ಇಂಥವರನ್ನೆಲ್ಲ ಸಾಹಿತಿ ಅಂತ ಪರಿಗಣಿಸುವಷ್ಟು ಬರಗೆಟ್ಟು ಹೋಗಿದೆಯಾ ರಾಜ್ಯದ ಸಾರಸ್ವತ ಲೋಕ ಎಂದು ಖರ್ಗೆ ಪ್ರಶ್ನಿಸಿದರು. ಮುಂದುವರಿದು ಮಾತಾಡಿದ ಸಚಿವ, ಭಗತ್ ಸಿಂಗ್ ಬಗ್ಗೆ ಕಾಂಗ್ರೆಸ್ ಪಕ್ಷಕ್ಕೆ ಅಪಾರ ಗೌರವವಿದೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.